ಕುಂದಾಪುರ

ಸರಕಾರಿ ಹಿರಿಯ ಪ್ರಾಥಮಿಕ ಬಡಾಕೆರೆ ಶಾಲೆ ದತ್ತು ಸ್ವೀಕಾರ

Share

ಕುಂದಾಪುರ:ಆಧುನಿಕ ಶಿಕ್ಷಣದ ಜತೆಗೆ ಮಕ್ಕಳಿಗೆ ಸಂಸ್ಕಾರಯುತವಾದ ಶಿಕ್ಷಣ ದೊರೆತರೆ ಮಾತ್ರ ಉತ್ತಮ ನಾಗರಿಕರಾಗಿ ಸಮಾಜದಲ್ಲಿ ಬದುಕನ್ನು ಕಟ್ಟಿಕೊಳ್ಳಲು ಸಾದ್ಯವಿದೆ ಎಂದು ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀ ಶಾರದ ಪೀಠಂ ಶೃಂಗೇರಿ ವೇ.ಮೂ ಲೋಕೇಶ್ ಅಡಿಗ ನಾಗ ಪಾತ್ರಿಗಳು ಬಡಾಕೆರೆ ಹೇಳಿದರು.
ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಬಡಾಕೆರೆ ಶಾಲೆಯಲ್ಲಿ ನಡೆದ ಶಾಲೆ ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆಧುನಿಕ ಕಾಲಘಟ್ಟಕ್ಕೆ ಸರಿ ಹೊಂದುವಂತಹ ನಿಟ್ಟಿನಲ್ಲಿ ಮಕ್ಕಳಿಗೆ ಶಿಕ್ಷಣವನ್ನು ನೀಡಬೇಕಾದ ಅಗತ್ಯತೆ ಇದೆ.ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದರು.ಸರಕಾರಿ ಶಾಲೆಯನ್ನು ಸರ್ವತೊಮುಖವಾಗಿ ಅಭಿವೃದ್ಧಿಗೊಳಿಸಲು ಎಲ್ಲಾ ರೀತಿಯಲ್ಲಿಯೂ ಸಹಕಾರ ನೀಡಲಾಗುದು ಎಂದು ಹೇಳಿದರು.
ವೇ.ಮೂ ಲಕ್ಷ್ಮೀಶ ಅಡಿಗ ಅವರು ಶಾಲೆಯನ್ನು ದತ್ತು ಸ್ವೀಕಾರ ಮಾಡಿ ಮಾತನಾಡಿ,ಊರಿನವರು ಎಲ್ಲಾ ರೀತಿಯಲ್ಲಿ ಸಹಕಾರವನ್ನು ನೀಡಬೇಕೆಂದು ಕೇಳಿಕೊಂಡರು.
ಬೈಂದೂರು ವಲಯದ ಬಿ.ಒ ನಾಗೇಶ ನಾಯ್ಕ್ ದಾನಿಗಳಿಗೆ ಕರಾರು ಪತ್ರವನ್ನು ಹಸ್ತಾಂತರಿಸಿ ಮಾತನಾಡಿ,ಬೈಂದೂರು ವಲಯದಲ್ಲಿ ಒಂದು ತಿಂಗಳ ಅವಧಿ ಒಳಗೆ ಮೂರು ಸರಕಾರಿ ಶಾಲೆಗಳನ್ನು ದಾನಿಗಳು ದತ್ತು ಸ್ವೀಕಾರ ಮಾಡಿದ್ದಾರೆ.ಇದೊಂದು ಐತಿಹಾಸಿಕ ಕ್ಷಣ,ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆದ ದಿನಗಳಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಶ್ರೀಧರ ದೇವಾಡಿಗ ಮತ್ತು ಉಪಾಧ್ಯಕ್ಷೆ ಸರೋಜ ಶೆಟ್ಟಿ ಹಾಗೂ ಸದಸ್ಯರು,ಇಸಿಒ ಸತ್ಯನಾ ಕೊಡೇರಿ,ವೇ.ಮೂ ನಾಗೇಂದ್ರ ಅಡಿಗ,ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಗಿರೀಶ್ ಶೇಟ್,ಗ್ರಾಮಸ್ಥರು,ಶಿಕ್ಷಕವೃಂದವರು ಉಪಸ್ಥಿತರಿದ್ದರು.ಶಾಲಾ ಮುಖ್ಯೋಪಾಧ್ಯಾಯಿನಿ ರೋಹಿಣಿ ಸ್ವಾಗತಿಸಿದರು.ಸಹ ಶಿಕ್ಷಕಿ ರಶ್ಮಿ ವಂದಿಸಿದರು.5 ವರ್ಷಗಳ ಅವಧಿಗೆ ಬಡಾಕೆರೆ ಶಾಲೆಯನ್ನು ದತ್ತು ಸ್ವೀಕಾರ ಮಾಡಲಾಗಿದೆ.

ವರದಿ ಜಗದೀಶ ದೇವಾಡಿಗ
ನಮ್ಮ ಜಾಲತಾಣದಲ್ಲಿ ಸುದ್ದಿಗಳನ್ನು ಪ್ರಕಟಿಸಲು ಸಂಪರ್ಕಿಸಿ- 9916284048

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago