ಕುಂದಾಪುರ:ಗಂಗೊಳ್ಳಿಯಿಂದ 15 ನಾಟಿಕಲ್ ಮೈಲು ದೂರದಲ್ಲಿ ಆಳಸಮುದ್ರ ಮೀನುಗಾರಿಕೆ ಮಾಡುತ್ತಿದ್ದ ಸಮಯದಲ್ಲಿ ಬೋಟ್‍ನೊಳಗೆ ನೀರು ನುಗ್ಗಿದ ಪರಿಣಾಮ ಅಪಾಯಕ್ಕೆ ಸಿಲುಕಿದ ಏಳು ಮೀನುಗಾರರನ್ನು ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದ ಭಾರತೀಯ ಕೋಸ್ಟ್ ಗಾರ್ಡ್ ಕಂಟ್ರೋಲ್ ತಂಡದವರು ಹಾಗೂ ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಬುಧವಾರ ನಡೆದಿದೆ.
ಉತ್ತರ ಕನ್ನಡ ಮೂಲದ ಕಿರಣ ನಾರಾಯಣ ಹರಿಕಂತ್ರ,ದೇವರಾಜು ಈಶ್ವರ ಹರಿಕಂತ್ರ,ಅರವಿಂದ ಗಣಪತಿ ಹರಿಕಂತ್ರ,ನಾಗೇಶ ಗಣಪಯ್ಯ ಹರಿಕಂತ್ರ,ದಿಲ್‍ಸಿಂಗ್ ಕಾಲು,ಚಂದ್ರ ಶೇಖರ ದುರ್ಗಾ ಮೊಗೇರ,ಸೋಮೇಶ್ವರ ಹರಿಕತಂತ್ರ ರಕ್ಷಿಸಲ್ಪಟ್ಟವರು.
ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭ ಬೋಟ್‍ನ ಇಂಜಿನ್ ಕೊಠಡಿ ವಿಭಾಗದಲ್ಲಿ ರಂಧ್ರ ಉಂಟಾಗಿದ್ದರಿಂದ ಭಾರಿ ಪ್ರಮಾಣದಲ್ಲಿ ನೀರು ಒಳ ನುಗ್ಗಿದೆ.ನೀರು ಒಳ ನುಗ್ಗಿದ್ದ ಪರಿಣಾಮ ಬೋಟ್ ಮುಳುಗುವ ಹಂತಕ್ಕೆ ತಲುಪಿದೆ.ಅಪಾಯದ ಗಂಭೀರತೆಯನ್ನು ಅರಿತ ಮೀನುಗಾರರು ತಕ್ಷಣ ಗಂಗೊಳ್ಳಿ ಕರಾವಳಿ ಕಾವಲು ಪಡೆ ಪೆÇಲೀಸ್ ಠಾಣೆಗೆ ದೂರವಾಣಿ ಮೂಲಕ ಕರೆ ಮಾಡಿದ್ದಾರೆ.ಅದೆ ಸಮಯದಲ್ಲಿ ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದ ಭಾರತೀಯ ಕೋಸ್ಟ್ ಗಾರ್ಡ್ ಕಂಟ್ರೋಲ್ ತಂಡದವರು ಸ್ಥಳಕ್ಕೆ ಧಾವಿಸಿ ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಿಸಿ ಸುರಕ್ಷಿತವಾಗಿ ದಡವನ್ನು ತಲುಪಿಸಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…