ಮಂಗಳೂರು;ಪುದುವೆಟ್ಟು ಎಂಬಲ್ಲಿ ಹಾದು ಹೋಗಿರುವ ಪೆಟ್ರೋಲಿಯಂ ಪೈಫ್ ಲೈನ್ ಗೆ ಕನ್ನ ಕೊರೆದು ಲಕ್ಷಾಂತರ ಮೌಲ್ಯದ ಪೆಟ್ರೋಲ್ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.ಪೈನ್ ಲೈನ್ ಕೊರೆದು ಪೆಟ್ರೋಲ್ ಕಳ್ಳತನ ಮಾಡಿರುವ ಬಗ್ಗೆ
ಸಂಬಂಧಿಸಿದ ಕಂಪನಿಯವರು ನೀಡಿರುವ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಈ ಬಗ್ಗೆ ಪೆಟ್ರೋನೆಟ್ ಎಂ ಹೆಚ್ ಬಿ ಲಿಮಿಟೆಡ್ ನ ನೆರಿಯದ ಸ್ಟೇಶನ್ ಇನ್ ಚಾರ್ಜ್ ಆಗಿರುವ ರಾಜನ್ ಅವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದು ಮಂಗಳೂರು ಹಾಸನ್ ಬೆಂಗಳೂರು ಪೆಟ್ರೋನೆಟ್ ಪೈಪ್ ಮೂಲಕ ಪೆಟ್ರೋಲಿಯಂ ವಸ್ತುಗಳು ಸಾಗಾಟವಾಗುತ್ತಿದ್ದು ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಆಲಡ್ಕ ಎಂಬಲ್ಲಿ ಮಾ16ರಿಂದ 19ರ ವರೆಗೆ ಕಳ್ಳರು ಪೆಟ್ರೋಲಿಯಂ ಪೈಪ್ ಲೈನ್ ಗೆ ಕನ್ನಕೊರೆದು ಸದ್ರಿ ಪೈಪ್ ಲೈನ್ ಗೆ 2.5ಇಂಚಿನ ಹೆಚ್ ಡಿ.ಪಿ ಇ ಪೈಪ್ ಅನ್ನು ಅಳವಡಿಸಿ ಆಮೂಲಕ ಸುಮಾರು 12,000ಲೀಟರ್ ಗೂ ಅಧಿಕ ತೈಲವನ್ನು ಕಳವು ಮಾಡಿದ್ದು ಇದರ ಅಂದಾಜು ಮೌಲ್ಯ ಸುಮಾರು9,60,000 ಆಗಬಹುದು ಎಂದು ದೂರಿನಲ್ಲಿ ತಿಳಿಸಿದ್ದಾರೆ
ಇದೀಗ ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸ್ಥಳೀಯರ ಸಹಕಾರದೊಂದಿಗೆ ದೊಡ್ಡ ಮಟ್ಟದ ತೈಲ ಕಳ್ಖತನ ನಡೆದಿದೆ ಎಂದು ಅನುಮಾನಿಸಲಾಗಿದೆ. ಪೊಲೀಸರು ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…