ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ-2 ಬಗ್ವಾಡಿಯಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ ಕಾರ್ಯಕ್ರಮ ಸರಳವಾಗಿ ಶುಕ್ರವಾರ ನಡೆಯಿತು.ಆಭರಣ ಪೌಂಡೇಶನ್ ಶ್ರೀರಂಗನಾಥ್ ಅವರು ಕಂಪ್ಯೂಟರ್ ತರಗತಿ ಕೋಣೆಯನ್ನು ಉದ್ಘಾಟಿಸಿ ಶುಭಹಾರೈಸಿದರು.
ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಮಂಜುನಾಥ್ ಪುತ್ರನ್,ಶತಮಾನೋತ್ಸವ ಸಮಿತಿ ಅಧ್ಯಕ್ಷ ರಾಜೀವ ಶೆಟ್ಟಿ,ನಿವೃತ್ತ ಐಎಎಸ್ ಅಧಿಕಾರಿ ಬಿ.ಎನ್ ಶೆಟ್ಟಿ,ನಿವೃತ್ತ ಬ್ಯಾಂಕ್ ಅಧಿಕಾರಿ ಸೂಲಿಯಣ್ಣ,ಪುರೋಹಿತರಾದ ಮಂಜುನಾಥ್ ಭಟ್ ಹರೇಗೋಡು,ಎಸ್‍ಡಿಎಂಸಿ ಸದಸ್ಯರು,ಹಳೆ ವಿದ್ಯಾರ್ಥಿಗಳು,ಅಂಗನವಾಡಿ ಕಾರ್ಯಕರ್ತೆಯರು,ಶಿಕ್ಷಕವೃಂದವರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕಿ ಶೈಲಜಾ ಶೆಟ್ಟಿ ಸ್ವಾಗತಿಸಿದರು.ಗೌರವ ಶಿಕ್ಷಕಿ ಸ್ವಾತಿ ನಿರೂಪಿಸಿದರು.ಸಹಶಿಕ್ಷಕಿ ಸತ್ಯವತಿ ವಂದಿಸಿದರು.ಆಭರಣ ಪೌಂಡೇಶನ್‍ನ ಸಿಎಸ್‍ಆರ್ ನಿಧಿಯಿಂದ 1.68 ಲಕ್ಷ.ರೂ ಮೌಲ್ಯದ 5 ಕಂಪ್ಯೂಟರ್‍ನ್ನು ಸರಕಾರಿ ಶಾಲೆಗೆ ಕೊಡುಗೆ ಆಗಿ ನೀಡಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…