ಕುಂದಾಪುರ

ಹರ್ಕೂರು ಶ್ರೀಮಹಾಗಣಪತಿ ದೇವಸ್ಥಾನ,ಬೆಳ್ಳಿ ಪ್ರಭಾವಳಿ ಮೆರಣಿಗೆ

Share

ಕುಂದಾಪುರ:ತಾಲೂಕಿನ ಹರ್ಕೂರು ಗ್ರಾಮದ ಶ್ರೀಮಹಾಗಣಪತಿ ದೇವಸ್ಥಾನದ ತಾಮ್ರದ ಹೊದಿಕೆಯ ನೂತನ ಶಿಲಾದೇಗುಲ ಸಮರ್ಪಣೆ,ಬ್ರಹ್ಮಕಲಶೋತ್ಸವ ಹಾಗೂ ಶ್ರೀದೇವರ ಪುನರ್ ಪ್ರತಿಷ್ಠೆ ಅಂಗವಾಗಿ ಶ್ರೀಗಣಪತಿ ದೇವರಿಗೆ ಸಮರ್ಪಣೆ ಮಾಡಲಿರುವ ಬೆಳ್ಳಿ ಕಿರೀಟ ಮತ್ತು ಬೆಳ್ಳಿ ಪ್ರಭಾವಳಿಯನ್ನು ಚಂಡೆವಾದನ,ಪೂರ್ಣಕುಂಭ ಸ್ವಾಗತದೊಂದಿಗೆ ಭವ್ಯ ಮೆರವಣಿಗೆ ಮೂಲಕ ಸೋಮವಾರ ಬರಮಾಡಿಕೊಳ್ಳಲಾಯಿತು.
ಹರ್ಕೂರು ಶ್ರೀಚಾಮುಂಡೇಶ್ವರಿ ದೇವಸ್ಥಾನದಿಂದ ಹೊರಟ ಮೆರವಣಿಗೆ ಹರ್ಕೂರು ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ಸಮಾಪ್ತಿಗೊಂಡಿತು.ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬೆಳ್ಳಿ ಪ್ರಭಾವಳಿಗೆ ಪೂಜೆಯನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,ಸರ್ವ ಸದಸ್ಯರು,ಗ್ರಾಮಸ್ಥರು ಹಾಗೂ ಅರ್ಚಕರು ಉಪಸ್ಥಿತರಿದ್ದರು.
ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಉದ್ಯಮಿಗಳು ಘಟಪ್ರಭಾ ಎಚ್.ಜಯಶೀಲ ಎನ್ ಶೆಟ್ಟಿ ಅವರು ಮಾತನಾಡಿ,ಹರ್ಕೂರು ಶ್ರೀಮಹಾಗಣಪತಿ ದೇವರ ಪುನರ್ ಪ್ರತಿಷ್ಠೆ ಮತ್ತು ನೂತನ ಶಿಲಾದೇಗುಲದ ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ಶ್ರೀ ಮಹಾಗಣಪತಿ ದೇವರಿಗೆ ಸಮರ್ಪಣೆ ಮಾಡಲಿರುವ ಬೆಳ್ಳಿ ಪ್ರಭಾವಳಿ ಮತ್ತು ಮುಖವಾಡವನ್ನು ಭವ್ಯ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಬರಮಾಡಿಕೊಳ್ಳಲಾಗಿದೆ ಎಂದರು.ಸತತ ಮೂರು ದಿನಗಳ ನಡೆಯುವ ದೇವತಾ ಕಾರ್ಯದಲ್ಲಿ ಎಲ್ಲರೂ ಭಾಗವಹಿಸಬೇಕೆಂದು ಕೇಳಿಕೊಂಡರು.
ದೇವಸ್ಥಾನದ ಗೌರವ ಸಲಹೆಗಾರರಾದ ಕೃಷ್ಣಪ್ರಸಾದ ಅಡ್ಯಂತಾಯ ಅವರು ಮಾತನಾಡಿ,ಬಹಳ ಪುರಾತನವಾದ ಅಜೀರ್ಣಾವಸ್ಥೆಯಲ್ಲಿದ್ದ ದೇವಾಲಯವನ್ನು ಹರ್ಕೂರು ಮನೆಯವರು ಹಾಗೂ ಗ್ರಾಮಸ್ಥರೆಲ್ಲ ಕೂಡಿಕೊಂಡು ಭವ್ಯವಾದ ಶಿಲಾದೇಗುಲ ತ್ರಾಮದ ಹೋದಿಕೆಯೊಂದಿಗೆ ನಿರ್ಮಿಸಲಾಗಿದೆ.ಇವೊಂದು ದೇವತಾ ಕೈಂಕರ್ಯದಲ್ಲಿ ತೊಡಗಿಕೊಂಡಿರುವ ಎಲ್ಲರೂ ಶ್ರೀಮಹಾಗಣಪತಿ ದೇವರು ಒಳಿತನ್ನು ಮಾಡಲಿ ಎಂದರು.ಇವೊಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕೆಂದು ಕೇಳಿಕೊಂಡರು.
ದೇವಸ್ಥಾನದ ಕಾರ್ಯಾಧ್ಯಕ್ಷರಾದ ಮಂಜಯ್ಯ ಶೆಟ್ಟಿ ಹರ್ಕೂರು ಅವರು ಮಾತನಾಡಿ,ಶ್ರೀಮಹಾಗಣಪತಿ ದೇವರ ಪ್ರತಿಷ್ಠಾಪನಾ ಕಾರ್ಯದ ಅಂಗವಾಗಿ ನಾನಾ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಪ್ರಥಮ ಪೂಜಿತ ಗಣಪತಿ ದೇವರ ಕೃಪೆಗೆ ಎಲ್ಲರೂ ಪಾತ್ರರಾಗಬೇಕೆಂದರು.
ದೇವಸ್ಥಾನದ ಗೌರವಾಧ್ಯಕ್ಷರಾದ ಚಿತ್ತರಂಜನ್ ಹೆಗ್ಡೆ ಮಾತನಾಡಿ,300ಕ್ಕೂ ಅಧಿಕ ವರ್ಷಗಳ ಇತಿಹಾಸವನ್ನು ಹೊಂದಿರುವ ಅಜೀರ್ಣಾವಸ್ಥೆಯಲ್ಲಿದ್ದ ಶ್ರೀಮಹಾಗಣಪತಿ ದೇವರ ದೇವಸ್ಥಾನವನ್ನು ಅತ್ಯಂತ ವ್ಯವಸ್ಥಿತವಾದ ರೀತಿಯಲ್ಲಿ ಕಟ್ಟಲಾಗಿದೆ.ಶ್ರೀದೇವರ ಪುನರ್ ಪ್ರತಿಷ್ಠೆ ಹಾಗೂ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮ ಮಂಗಳವಾರದಿಂದ ಆರಂಭಗೊಂಡು ಗುರುವಾರದ ತನಕ ನಿರಂತರವಾಗಿ ನಡೆಯಲಿದೆ ಎಂದರು.ಇವೊಂದು ದೇವತಾ ಕಾರ್ಯದಲ್ಲಿ ಊರಪರವೂರ ಭಕ್ತರು ಭಾಗವಹಿಸಬೇಕೆಂದು ವಿನಂತಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಎಲ್ಲಾ ಪದಾಧಿಕಾರಿಗಳು,ಸದಸ್ಯರು,ಅರ್ಚಕರು,ಗ್ರಾಮಸ್ಥರು ಉಪಸ್ಥಿತರಿದ್ದರು.
ಹರ್ಕೂರು ಶ್ರೀಮಹಾಗಣಪತಿ ದೇವರ ನೂತನ ಶಿಲಾಮಯ ದೇಗುಲ ಲೋಕಾರ್ಪಣೆ ಮತ್ತು ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮಾಚ್.26 ರ ಮಂಗಳವಾರದಿಂದ ಮಾರ್ಚ್.28 ಗುರುವಾರದ ವರಗೆ ನಡೆಯಲಿದೆ.

ವರದಿ:- ಜಗದೀಶ
ನಮ್ಮ ಜಾಲತಾಣದಲ್ಲಿ ಸುದ್ದಿಗಳನ್ನು ಪ್ರಕಟಿಸಲು ಸಂಪರ್ಕಿಸಿ- 9916280048

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago