ಕುಂದಾಪುರ:ಪ್ರಜಾಪ್ರಭುತ್ವಕ್ಕೆ ಚುನಾವಣೆಯೇ ತಳಪಾಯ
ಈ ಪ್ರಕ್ರಿಯೆ ಪಾರದರ್ಶಕವಾಗಿ ನಡಿಯಬೇಕು ಮತ್ತು ಎಲ್ಲರೂ ಭಾಗವಹಿಸುವಂತಾಗಬೇಕು. ಜನರು ಊರ ಹಬ್ಬವನ್ನು ಉತ್ಸಾಹದಿಂದ ಆಚರಿಸುವಂತೆ ಮತದಾನವೂ ಆಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ. ಕೆ ಹೇಳಿದರು.ಉಡುಪಿ ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ನೇತೃತ್ವದಲ್ಲಿ ಬೈಂದೂರು ತಾಲೂಕಿನ ಶಿರೂರು ಅಳ್ವೆಗದ್ದೆ ಮೀನುಗಾರಿಕಾ ಲಂಗರು ಪ್ರದೇಶದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇತ್ತಿಚಿಗೆ ಯುವಜನತೆ ಚುನಾವಣೆಯಿಂದ ವಿಪುಖರಾಗುತ್ತಿರುವುದು ಕಂಡುಬರುತ್ತಿದೆ.ಚುನಾವಣಾ ದಿನವೆಂದರೆ ರಜಾ ದಿನವಲ್ಲ. ಸಂವಿಧಾನ ನಮಗೆ ನೀಡುವ ಹಕ್ಕು ಹಾಗೂ ಜವಾಬ್ದಾರಿಯನ್ನು ನಿಭಾಯಿಸಲು ಮತದಾನ ಮಾಡುವುದು ಅಗತ್ಯ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಶತ ನೂರರಷ್ಟು ಮತದಾನವಾಗಿಲ್ಲ, ಕಡಿಮೆಯಾಗಿದೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ.100 ಮತದಾನ ಮಾಡುವ ಕಾರ್ಯವಾಗಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಪ್ರತೀಕ್ ಬಾಯಲ್,ಅಪರ ಜಿಲ್ಲಾಧಿಕಾರಿ ಮಮತಾ ಕುಮಾರಿ,ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್, ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್, ಸಹಾಯಕ ಚುನಾವಣಾಧಿಕಾರಿ ಮಂಜುನಾಥ್,ಬೈಂದೂರು ತಹಶಿಲ್ದಾರ್ ಪ್ರದೀಪ್, ಡಯಟ್ ಪ್ರಾಂಶುಪಾಲರಾದ ಗೋವಿಂದ ಮಡಿವಾಳ ಉಪಸ್ಥಿತರಿದ್ದರು.ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಆನಂದ ಎಸ್. ಬಡಕುಂದಿ ಸ್ವಾಗತಿಸಿ, ಶಿರೂರು ಪಂಚಾಯತ್ ಪಿಡಿಓ ರಾಜೇಶ್ ವಂದಿಸಿದರು. ತಾಲೂಕು ಪಂಚಾಯತ್ ಸಿಬ್ಬಂದಿ ರೂಪ ಕಾರ್ಯಕ್ರಮ ನಿರೂಪಿಸಿದರು.
ಮತದಾನ ಜಾಗೃತಿಗೆ ಸಂಬಂಧಿಸಿದಂತೆ ಶಿರೂರಿನ ಮಹಿಳೆಯರು ಲಂಗರು ಪ್ರದೇಶದಲ್ಲಿ ವಿವಿಧ ರಂಗೋಲಿಗಳನ್ನು ಬಿಡಿಸಿದ್ದು ಗಮನ ಸೆಳೆಯಿತು.
ಬಳಿಕ ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶಿರೂರಿನಿಂದ ನಾಯ್ಕನಕಲ್ಲು ಸ್ಕೂಬಾ ಡೈವಿಂಗ್ ಪ್ರದೇಶಕ್ಕೆ ತೆರಳಿ ವಿನೂತನವಾಗಿ ಮತದಾನ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡರು. ಸಮುದ್ರದ ಮಧ್ಯೆಯೇ ಜಿಲ್ಲಾಧಿಕಾರಿಗಳು ಪ್ರತಿಜ್ಞಾ ವಿಧಿ ಭೋದಿಸಿದರು. ಜಿಲ್ಲಾ ಪಂಚಾಯತ್ ಸಿಇಓ, ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಆಯುಕ್ತೆ ಅವರುಗಳು ಸ್ಕೂಭಾ ಡೈವಿಂಗ್ ಮೂಲಕ ತೆರಳಿ ಮತದಾನ ಜಾಗೃತಿಯ ಬಿತ್ತಿಪತ್ರಗಳನ್ನು ಪ್ರದರ್ಶಿಸಿದರು. ಮತದಾನ ಜಾಗೃತಿ ಬೋರ್ಡುಗಳನ್ನು ಪ್ರದರ್ಶಿಸಲಾಯಿತು.
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ಎಲೆವೆಂಶಿಯಾ 2ಕೆ24 ಫೆಸ್ಟ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.ರೋಬೊಸಾಫ್ಟ್…
ಉಡುಪಿ:ಜಿಲ್ಲೆಯ ಹೆಬ್ರಿ ತಾಲೂಕಿನ ಹೆಬ್ರಿ ಕಬ್ವಿನಾಲೆ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ…
ಕುಂದಾಪುರ:ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ,ಕರ್ನಾಟಕ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಕುಂದಾಪುರ ತಾಲೂಕು ಘಟಕ…
ಮುಳ್ಳಿಕಟ್ಟೆ:ಕುಂದಾಪುರ ದಿಂದ ಅರಾಟೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಮತ್ತು ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ…
ಜನತಾ ಆವಿಷ್ಕಾರ ಕಾರ್ಯಕ್ರಮದಲ್ಲಿ ತುಂಬಿದ ವಿದ್ಯಾರ್ಥಿ ಸಮೂಹ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಹೆಮ್ಮಾಡಿ:ಜಗತ್ತು ಇಂದು ವ್ಯಾವಹಾರಿಕವಾಗಿ ಮುನ್ನಡೆಯುತ್ತಿದ್ದು.ವಿದ್ಯಾರ್ಥಿಗಳು…