ಮಂಗಳೂರು:ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸಿದ ತ್ರಿಪುರ ಮೂಲದ ಆರೋಪಿಗಳನ್ನು ಖಚಿತ ಮಾಹಿತಿಯಂತೆ ಮುಲ್ಕಿ ಕೆಎಸ್ ರಾವ್ ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಬಂಧಿಸಿದ್ದು ಆರೋಪಿಗಳಿಂದ ಲಕ್ಷಾಂತರ ರೂ ಮೌಲ್ಯದ ಸುಮಾರು 6 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳನ್ನು ತ್ರಿಪುರ ಮೂಲದ ಸಚ್ಲಾಂಗ್ ದೆಬರ್ಮ(22) ಮತ್ತುಪ್ರಮೇಶ್ ದೆಬರ್ಮ(22) ಎಂದು ಗುರುತಿಸಲಾಗಿದೆ.
ಆರೋಪಿಗಳು ಗಾಂಜಾ ವನ್ನು ತಲಾ ಒಂದುವರೆ ಕೆಜಿಯಂತೆ ಪಾರ್ಸೆಲ್ ಮಾಡಿ ಸೂಟ್ಕೇಸ್ ನ ಒಳಗಡೆ ಪ್ಯಾಕ್ ಮಾಡಿ ಯಾರಿಗೂ ಅನುಮಾನ ಬಾರದಂತೆ ಬಚ್ಚಿಟ್ಟು ಮುಲ್ಕಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಖಚಿತ ಮಾಹಿತಿಯಂತೆ ಮುಲ್ಕಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ರೈಲ್ವೆ ಸ್ಟೇಷನ್ ಮುಖಾಂತರ ಮಣಿಪಾಲಕ್ಕೆ ತೆರಳಿ ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುವ ಸಲುವಾಗಿ ಹೋಗುತ್ತಿದ್ದರು ಎಂಬ ಮಾಹಿತಿ ಇದ್ದು ಪೊಲೀಸರು ಆರೋಪಿಗಳ ಯತ್ನವನ್ನು ವಿಫಲಗೊಳಿಸಿದ್ದು ಗಾಂಜಾ ಮಾರಾಟಗಾರರ ಕಿಂಗ್ ಪಿನ್ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ
ಕಾರ್ಯಾಚರಣೆಯಲ್ಲಿ ಮುಲ್ಕಿ ಪೊಲೀಸ್ ಉಪನಿರೀಕ್ಷಕ ವಿನಾಯಕ ಬಾವಿಕಟ್ಟೆ, ಸಿಬ್ಬಂದಿಗಳಾದ ಸಂಜೀವ, ಚಂದ್ರಶೇಖರ್, ಅರುಣ್ ಕುಮಾರ್, ಸುರೇಂದ್ರ, ವೀರೇಶ್ ಭಾಗವಹಿಸಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…