ಕುಂದಾಪುರ:ಕಳೆದ ಐದು ವರ್ಷಗಳ ಅವಧಿಯಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚಿನ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ವಿಯೋಗ ಮಾಡುವುದರ ಮುಖೇನ ನಾವುಂದ ಲಯನ್ಸ್ ಕ್ಲಬ್ ಜನಾ ಸೇವಾ ಕಾರ್ಯದಲ್ಲಿ ತನ್ನನೆ ತಾನು ತೊಡಗಿಸಿ ಕೊಂಡಿರುವುದು ಶ್ಲಾಘನೀಯ ಕೆಲಸವಾಗಿದೆ ಎಂದು ಲಯನ್ಸ್ ಜಿಲ್ಲಾ ಗರ್ವನರ್ ಡಾ.ನೇರಿ ಕರ್ನೇಲಿಯೊ ಹೇಳಿದರು.
ನಾವುಂದ ಲಯನ್ಸ್ ಕ್ಲಬ್‍ಗೆ ಶನಿವಾರ ಅಧಿಕೃತವಾಗಿ ಭೇಟಿ ನೀಡಿದ ಅವರು ಅರೆಹೊಳೆ ಕ್ರಾಸ್ ನಾವುಂದ ಮಾಹಾಲಸ ಮಾಂಗಲ್ಯ ಆರ್ಕೇಡ್ ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಾವುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರದೀಪ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಲಯನ್ಸ್ ಕ್ಲಬ್ ಪ್ರಮುಖರಾದ ಮಹಮ್ಮದ್ ಹನಿಫ್,ಸಪ್ನಾ ಸುರೇಶ,ಏಕನಾಥ ಬೋಳಾರ್,ಝೊನ್ ಚೆರ್‍ಪರ್ಸನ್ ಜಗದೀಶ ಶೆಟ್ಟಿ ಕುದ್ರುಕೋಡು,ಬೋಜರಾಜ ಶೆಟ್ಟಿ,ನಾವುಂದ ಕ್ಲಬ್ಬಿನ ಕೋಶಾಧಿಕಾರಿ ರಮೇಶ ಮೊಗವೀರ,ಕಾರ್ಯದರ್ಶಿ ಅಶೋಕ ಆಚಾರ್ಯ,ನರಸಿಂಹ ದೇವಾಡಿಗ ಮತ್ತು ಸದಸ್ಯರು ಉಪಸ್ಥಿತರಿದ್ದರು.ಸೌಪರ್ಣಿಕಾ ತ್ರೈಮಾಸಿಕ ಬುಲೆಟಿನ್ ಬಿಡುಗಡೆ ಮಾಡಲಾಯಿತು.ರಾಷ್ಟ್ರಮಟ್ಟದಲ್ಲಿ ಸಾಧನೆಗೈದಿರುವ ಆಲೂರು ಪ್ರೌಢಶಾಲೆ ವಿದ್ಯಾರ್ಥಿಗಳಾದ ಸಿಂಚನ ಶೆಟ್ಟಿ,ಗಿರಿಷ್ಮಾ,ಪ್ರಜ್ಞಾ ಹಾಗೂ ಆಯುರ್ವೇದ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೆ ಸ್ಥಾನ ಪಡೆದ ರಶ್ಮಿ.ಆರ್ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು.ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಲಾಯಿತು.ಡಾ.ಮಹಮ್ಮದ್ ಹನಿಫ್ ಅವರು ನಾವುಂದ ಕೋಯಾನಗರ ಶಾಲಾ ಅಭಿವೃದ್ಧಿಗೆ 25,000.ರೂ ಅನುದಾನದ ಚೆಕ್ ನೀಡಿದರು.ಪ್ರದೀಪ್ ಶೆಟ್ಟಿ ಸ್ವಾಗತಿಸಿದರು.ಶಶಿಧರ ಶೆಟ್ಟಿ ನಿರೂಪಿಸಿದರು,ಅಶೋಕ ಆಚಾರ್ಯ ವರದಿ ವಾಚಿಸಿದರು.ಸುಮಾರು 1.65 ಲಕ್ಷ.ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ನಾವುಂದ ನಾಗಯ್ಯ ಶೆಟ್ಟಿ ಪ್ರಯಾಣಿಕರ ತಂಗುದಾಣವನ್ನು ಗುಲಾಬಿ ಶೆಟ್ಟಿ ಅವರು ಉದ್ಘಾಟಿಸಿದರು.ಅವರನ್ನು ನಾವುಂದ ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.
ಸುದ್ದಿಗಳನ್ನು ನಮ್ಮ ಜಾಲಾತಾಣದಲ್ಲಿ ಪ್ರಕಟಿಸಲು ಈ ನಂಬರ್‍ಗೆ ವಾಟ್ಸ್‍ಆಪ್ ಮಾಡಿ-9141825696
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…