ಕುಂದಾಪುರ

ಶಿವಮೊಗ್ಗ ಕ್ಷೇತ್ರದ ಅಭಿವೃದ್ಧಿ ಬಿ.ವೈ ರಾಘವೇಂದ್ರ ಅವರ ಗೆಲುವಿಗೆ ನಮ್ಮ ಶ್ರಮ,ವಿಜಯ ಕೊಡವೂರು

Share

ಕುಂದಾಪುರ:ಭಾರತೀಯ ಜನತಾ ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾದಿಂದ ಸಣ್ಣ ಸಣ್ಣ ಸಮುದಾಯಗಳು ಮತ್ತು ವಿವಿಧ ವೃತ್ತಿ ಬಾಂಧವರ ಸಮಾವೇಶ ನಡೆಸಲಾಗುವುದು. ಆ ಮೂಲಕ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮೀಸಲಿದ್ದೇವೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾಗಳ ಜಿಲ್ಲಾಧ್ಯಕ್ಷ ವಿಜಯ್ ಕೊಡವೂರು ಹೇಳಿದರು.
ಬೈಂದೂರು ಅಂಬಿಕಾ ಇಂಟರ್ನ್ಯಾಶನಲ್ ಹೋಟೆಲ್ ನಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತ‌ನಾಡಿದ ಅವರು, ಬೈಂದೂರು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ‌‌ ಮೋರ್ಚಾದ ಪದಗ್ರಹಣ ಕಾರ್ಯಕ್ರಮ ಆಗಿದೆ.ಭವ್ಯ ಭಾರತದ ನಿರ್ಮಾಣಕ್ಕಾಗಿ ಶ್ರಮಿಸಬೇಕು ಎನ್ನುವ ಹಿನ್ನೆಲೆಯಲ್ಲಿ ವಿವಿಧ ಮೋರ್ಚಾಗಳ ಚಟುವಟಿಕೆ ನಡೆಯುತ್ತಿದೆ.ಹಿಂದುಳಿದ ವರ್ಗದವರನ್ನೇ ಸಂಘಟಿಸಿ ಪಕ್ಷಕ್ಕೆ ಕರೆತರುವ ಪ್ರಯತ್ನವನ್ನು ಹಿಂದುಳಿದ ವರ್ಗಗಳ ಮೋರ್ಚಾದಿಂದ ಮಾಡಲಾಗುತ್ತಿದೆ.ಬೈಂದೂರು ಮಂಡಲದಿಂದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ವ್ಯಾಪ್ತಿಯನ್ನು ವಿಸ್ತರಿಸುವ ದೃಷ್ಟಿಯಿಂದ ಹಿಂದುಳಿದ ವರ್ಗದಲ್ಲಿ ಬರುವ ಸಣ್ಣ ಸಣ್ಣ ಜಾತಿಗಳ ಸಮಾವೇಶ ಮಾಡುವುದು, ಆ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಯೋಜನೆ ಮತ್ತು ಯೋಚನೆಯನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸುತ್ತಿದ್ದೇವೆ ಎಂದರು.
ಮನವೊಲಿಸುವ ಪ್ರಯತ್ನ ನಡೆಯಲಿದೆ:ಕೆ.ಎಸ್. ಈಶ್ವರಪ್ಪನವರು ಒಂದು ಹಂತದಲ್ಲಿ ಬಿಜೆಪಿಗೆ ಶಕ್ತಿ ತುಂಬಿದ ವ್ಯಕ್ತಿ. ಈಗ ಟಿಕೆಟ್ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಹೀಗೆ ಮಾಡಿರಬಹುದು. ಪಕ್ಷದ ಹಿರಿಯರು ಅದನ್ನು ಸರಿಪಡಿಸುವ ವಿಶ್ವಾಸ ನಮಗಿದೆ.ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು ಎಂಬ ತುಡಿತ ಎಲ್ಲರಲ್ಲೂ ಇರುವುದರಿಂದ ಬೇರೆಯಾವ ಚಟುವಟಕೆಯೂ ಈ ಚುನಾವಣೆಯಲ್ಲಿ ಮುಖ್ಯವಾಗಲಾರದು.ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಪ್ರಧಾನಿ ಮೋದಿಯವರ ಕೈ ಬಲಪಡಿಸಲಾಗುತ್ತದೆ ಎಂದರು.
ಹಿಂದುತ್ವ ಬಿಟ್ಟು ಬಿಜೆಪಿಯಿಲ್ಲ. ಬಿಜೆಪಿ‌ ಸದಾ ದೇಶದ ಬಹುಸಂಖ್ಯಾತರ ಪರವಾಗಿಯೇ ಇರಲಿದೆ. ಅಭಿವೃದ್ಧಿಯ ಜತೆಗೆ ಹಿಂದುತ್ವ ಮೂಲಕ ಚುನಾವಣೆ ಎದುರಿಸುತ್ತಿದ್ದೇವೆ ಎಂದರು.
ಯಾರಿಗೂ ಅನ್ಯಾಯವಾಗಲಿಲ್ಲ:
ಬಿಜೆಪಿಯಿಂದ ಜಯಪ್ರಕಾಶ್ ಹೆಗ್ಡೆಯವರಿಗೆ ಯಾವುದೇ ಅನ್ಯಾಯವಾಗಿಲ್ಲ. ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ನಂತರದಲ್ಲಿ ಅವರನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಅವಧಿ ಮುಗಿಯುತ್ತಿದ್ದಂತೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಯ ಟಿಕೆಟ್ ಆಫರ್ ಮಾಡುತ್ತಿದ್ದಂತೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಉಳಿದದ್ದು ಅವರಿಗೆ ಬಿಟ್ಟ ವಿಚಾರವಾಗಿದೆ ಎಂದರು.
ಇಬ್ಬರೂ ಜಯಿಸಲಿದ್ದಾರೆ

ಶಿವಮೊಗ್ಗ ಕ್ಷೇತ್ರದಲ್ಲಿ ಬಿ.ವೈ. ರಾಘವೇಂದ್ರ ಹಾಗೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ
ಕೋಟ ಶ್ರೀನಿವಾಸ ಪೂಜಾರಿಯವರಿಗೆ ಟಿಕೆಟ್ ನೀಡಿದೆ. ಅವರು ಸಚಿವರಾಗಿಯೂ ಉತ್ತಮ ಕೆಲಸ ಮಾಡಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿಯೂ ಉತ್ತಮ ಕಾರ್ಯ ಮಾಡಿದ್ದಾರೆ. ಸಾಮಾನ್ಯ ಕಾರ್ಯಕರ್ತ, ಸರಳ ವ್ಯಕ್ತಿತ್ವದ ವ್ಯಕ್ತಿಗೆ ಪಕ್ಷ ಟಿಕೆಟ್ ನೀಡಿದೆ ಅವರೂ ಜಯ ಸಾಧಿಸಲಿದ್ದಾರೆ ಎಂದರು.
ಹಿಂದೂಳಿದ ವರ್ಗ ಮೋರ್ಚಾದ ರವೀಂದ್ರ ತಿಂಗಳಾಯ ಕುಂದಾಪುರ, ಶಿವರಾಜ್ ಪೂಜಾರಿ ಗೋಳಿಹೊಳೆ, ಭಾರತಿ ಚಂದ್ರಶೇಖರ್, ಶಾಂತಿ ಖಾರ್ವಿ, ಮಂಜುನಾಥ ದೇವಾಡಿಗ, ರಾಘವೇಂದ್ರ ಕೊಠಾರಿ, ವಿನೋದ್ ಗುಜ್ಜಾಡಿ, ರಾಜಶೇಖರ ಬೈಂದೂರು, ಶ್ರೀಗಣೇಶ್ ಗಾಣಿಗ ಉಪಸ್ಥಿತರಿದ್ದರು.
ವರದಿ-ಅಲ್ಪಾಜ್
ಸುದ್ದಿಗಳನ್ನು ನಮ್ಮ ಜಾಲತಾಣದಲ್ಲಿ ಬಿತ್ತರಿಸಲು ಸಂಪರ್ಕಿಸಿ -9141825696
ವಾಟ್ಸ್ ಆ್ಯಪ್ ನಂಬರ್

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago