ಕುಂದಾಪುರ:ತಾಲೂಕಿನ ಗಂಗೊಳ್ಳಿ ಜಾಮೀಯಾ ಕಾಂಪ್ಲೆಕ್ಸ್‍ನಲ್ಲಿರುವ ಮಾಲಿ ರಿಜ್ವಾನ್ ಎಂಬುವವರ ಎಮ್.ಎಮ್ ಕಲೆಕ್ಷನ್ ಬಟ್ಟೆ ಹಾಗೂ ಪ್ಯಾನ್ಸಿ ಅಂಗಡಿಗೆ ನುಗ್ಗಿದ ಕಳ್ಳರು 90,000.ರೂ ನಗದು ಹಾಗೂ 15,000.ರೂ ಮೌಲ್ಯದ ಮೊಬೈಲ್ ಕಳವು ಗೈದಿರುವ ಘಟನೆ ಭಾನುವಾರ ನಡೆದಿದೆ.
ಎಮ್.ಎಮ್ ಕಲೆಕ್ಷನ್ ಬಟ್ಟೆ ಹಾಗೂ ಪ್ಯಾನ್ಸಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರು ಸಂಜೆ ಸುಮಾರು 7 ಗಂಟೆ ಸುಮಾರಿಗೆ ಅಂಗಡಿಗೆ ಬಾಗಿಲನ್ನು ಹಾಕಿ ಪ್ರಾರ್ಥನೆಗೆಂದು ಮಸೀದಿಗೆ ತೆರಳಿದ ಸಮಯದಲ್ಲಿ ಅಂಗಡಿಗೆ ನುಗ್ಗಿದ ಕಳ್ಳರು ಕ್ಯಾಶ್ ಕೌಂಟರ್‍ನಲ್ಲಿದ್ದ ನಗದು ಹಾಗೂ ಬೆಲೆ ಬಾಳುವ ಮೊಬೈಲ್ ಕದ್ದು ಪರಾರಿಯಾಗಿದ್ದಾರೆ.ಈ ಸಂಬಂಧ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗಂಗೊಳ್ಳಿ ಠಾಣೆ ಪಿಎಸ್‍ಐ ಹರೀಶ್ ಆರ್ ಮತ್ತು ಸಿಬ್ಬಂದಿಗಳು ಸ್ಥಳ್ಕಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಇಳಿ ಸಂಜೆಯಲ್ಲಿ ನಡೆದ ಘಟನೆ ಸಾರ್ವಜನಿಕರನ್ನು ಬೆಚ್ಚಿಬಿಳಿಸಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…