ಕುಂದಾಪುರ

ಬೈಂದೂರು ಕ್ಷೇತ್ರದ ಜನರು ಪೊಳ್ಳು ಹಿಂದುತ್ವವಾದಿಗಳ ಮಾತನ್ನು ನಂಬಲ್ಲ- ಬಿ.ವೈ.ರಾಘವೇಂದ್ರ

Share

ಬೈಂದೂರು:ಪಕ್ಷದ ಚೌಕಟ್ಟಿನಲ್ಲಿ ಪಕ್ಷವೇ ಘೋಷಣೆ ಮಾಡಿದ ಅಭ್ಯರ್ಥಿ ಚುನಾವಣಾ ಅಖಾಡದಲ್ಲಿ ಇರುವಾಗ ಬೇರೊಬ್ಬ ವ್ಯಕ್ತಿ ಏನನ್ನು ಹೇಳಿದರು ಜನರು ಅದು ನಂಬಲ್ಲ ಮತದಾರರು ಸಾಕಷ್ಟು ಬುದ್ಧಿವಂತರಿದ್ದಾರೆ.ಹಿಂದುತ್ವ ವಿಚಾರದಲ್ಲಿ ಪೊಳ್ಳು ಹಿಂದುತ್ವ ವಾದಿಗಳಿಂದ ನಮಗೆ ಪಾಠ ಬೇಕಾಗಿಲ್ಲ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು.

ಬೈಂದೂರು ತಾಲೂಕಿನ ನಾಗೂರಿನಲ್ಲಿ ಮಂಗಳವಾರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಬಿ. ವೈ.ರಾಘವೇಂದ್ರ ಎಂಬುದನ್ನು ಪಕ್ಷವೇ ಅಧಿಕೃತವಾಗಿ ಘೋಷಣೆ ಮಾಡಿದೆ.ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ, ಅವರ ಪಕ್ಕದಲ್ಲೇ ನನ್ನನ್ನು ನಿಲ್ಲಿಸಿಕೊಂಡು ಪ್ರಚಾರವನ್ನು ಮಾಡಿ,ರಾಘವೇಂದ್ರ ಅವರಿಗೆ ಹಾರೈಸಿ,ಆಶೀರ್ವಾದ ಮಾಡಿದ್ದಾರೆ.‌ ಇಡೀ ಬಿಜೆಪಿ, ಪರಿವಾರ ನಮ್ಮ ಜತೆಗೆ ಇದೆ ಎಂದರು.
ಪ್ರಚಾರಕ್ಕಾಗಿ ಹಿಂದುತ್ವ ಪ್ರದರ್ಶಿಸುವವರು ನಾವಲ್ಲ
ದೇಶದಲ್ಲಿರುವ ಎಲ್ಲರೂ ಹಿಂದೂ ವಾದಿಗಳು.ನಾನು ಮಾತೃವಲ್ಲ, ಬಿ.ಎಸ್. ಯಡಿಯೂರಪ್ಪನವರು
ಅಯೋಧ್ಯೆಯ ರಾಮಜನ್ಮಭೂಮಿ ಆಂದೋಲನದ ಕರಸೇವಕರಾಗಿ ತಮ್ಮನ್ನು ತೊಡಗಿಸಿಕೊಂಡವರು, ಆರೆಸ್ಸೆಸ್ ಪ್ರಚಾರಕರಾಗಿ ಹುಬ್ಬಳ್ಳಿ ಈದ್ಗಾ ಮೈದಾನ ಹೋರಾಟ ಇರಬಹುದು, ಮುರಳಿ ಮನೋಹರ್ ಜೋಶಿಯವರು ಕರೆಕೊಟ್ಟ ಸಂದರ್ಭದಲ್ಲಿ ಕಾಶ್ಮೀರದ ಲಾಲ್ ಚೌಕ್ ನಲ್ಲಿ ಉಗ್ರಗಾಮಿಗಳ ದಾಳಿಯ ಮಧ್ಯದಲ್ಲಿ ತ್ರಿವರ್ಣ ಧ್ವಜ ಹಾರಿಸುವ ಹೋರಾಟದಲ್ಲಿ ಭಾಗವಹಿಸಿದ್ದರು.ಹೀಗಾಗಿ ಪ್ರಚಾರಕ್ಕಾಗಿ ಹಿಂದುತ್ವ ಪ್ರದರ್ಶನ ಮಾಡುವ ಅವಶ್ಯಕತೆ ನಮಗಿಲ್ಲ ಎಂದರು.

ಬಿಎಸ್ವೈ ಯೋಜನೆ ಬಲ
ಯಡಿಯೂಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ತಂದಿರುವ ಒಂದೊಂದು ಯೋಜನೆಯನ್ನು ಜನ ಈಗಲೂ ನೆನಪು ಮಾಡಿಕೊಳ್ಳುತ್ತಾರೆ. ಗೋ ಹತ್ಯೆ ನಿಷೇಧಕ್ಕೆ ಬಿಗಿ ಕಾನೂನು ತಂದಿದ್ದಾರೆ.ಭಾಗ್ಯ ಲಕ್ಷ್ಮೀ ಯೋಜನೆ ಮೂಲಕ ಹೆಣ್ಣು ಭ್ರೂಣ ಹತ್ಯೆಗೆ ಕಡಿವಾಣ ಹಾಕುವ ದೊಡ್ಡ ಪ್ರಯತ್ನ ಮಾಡಿದ್ದಾರೆ.ಕನಕದಾಸ ಜಯಂತಿ,ವಾಲ್ಮೀಕಿ ಜಯಂತಿ ಸೇರಿ ಅನೇಕ ಮಹನೀಯರ ಜಯಂತಿ, ಎಲ್ಲ ಮಠ ಮಂದಿರಗಳ ಅಭಿವೃದ್ಧಿ ಕಾರ್ಯಕ್ಕೆ ಆದ್ಯತೆ ನೀಡಿದ್ದರು. ಚುನಾವಣೆಗಾಗಿ ಹಿಂದುತ್ವ ನಮ್ಮದಲ್ಲ. ವೋಟಿಗಾಗಿ ಹಿಂದುತ್ವ ಬಳಸಿಕೊಳ್ಳುವವರಿಂದ ಪಾಠ ಅಗತ್ಯವಿಲ್ಲ ಎಂದು ಹೇಳಿದರು.

ಎರಡು ವಾರದಲ್ಲಿ ಏನಾಯ್ತಿ?:-
ಯಡಿಯೂರಪ್ಪನವರ ಕುಟುಂಬ ಎಲ್ಲ ಸಮಾಜವನ್ನು ಸಮಾನವಾಗಿ ಕಂಡಿದೆ ಮತ್ತು ಕಾಣುತ್ತಿದೆ ಎಂದು ಕಳೆದ ಎರಡು ವಾರದ ಕೆಳಗೆ ಈಶ್ವರಪ್ಪನವರು ಶಿಕಾರಿಪುರಕ್ಕೆ ಬಂದಿದ್ದಾಗ ಹೇಳಿದ್ದರು. ಐದು ಲಕ್ಷಕ್ಕೂ ಆಧಿಕ ಅಂತರದಲ್ಲಿ ರಾಘವೇಂದ್ರ ಅವರನ್ನು ಗೆಲ್ಲಿಸಬೇಕು ಎಂದು ಅವರೇ ಹೇಳಿದ್ದರು.ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಒಳ್ಳೆಯ ಕಾರ್ಯ ಮಾಡುತ್ತಿದ್ದಾರೆ ಎಂದು ಅವರೇ ಹಾರೈಸಿದ್ದರು. ಕೇವರ ಎರಡೇ ವಾರದಲ್ಲಿ ಈಶ್ವರಪ್ಪನವರಲ್ಲಿ ಈ ಬದಲಾವಣೆ ಏಕಾಯಿತು? ಇದನ್ನೆಲ್ಲವನ್ನು ಮತದಾರರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago