ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಾಘವೇಂದ್ರ ಭೇಟಿ
ಕುಂದಾಪುರ:ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯ ಆರಂಭಿಸುವ ಮುನ್ನ ಬಿ.ವೈ ರಾಘವೇಂದ್ರ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ಸನ್ನಿಧಾನಕ್ಕೆ ಮಂಗಳವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ,ತಾಯಿ ಮೂಕಾಂಬಿಕಾ ದೇವಿಯ ದರ್ಶನ ಪಡೆದರು.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಚ್ಚಿನ ಆಯಸ್ಸು ಆರೋಗ್ಯ ಕೊಟ್ಟು ದೇಶವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ಯುವ ಅವರ ಕನಸಿಗೆ ವಿಶೇಷ ಶಕ್ತಿ ನೀಡುವಂತೆ ಹಾಗೂ ನನ್ನ ಲೋಕಸಭಾ ಅವಧಿಯಲ್ಲಿ ಜನಗಳ ಸೇವೆಯನ್ನು ಮಾಡಲು,ಅಭಿವೃದ್ಧಿ ಕಾರ್ಯಗಳನ್ನು ಶರವೇಗದಲ್ಲಿ ತಲುಪಿಸಲು ಇನ್ನಷ್ಟು ಬಲ ಕೊಡುವಂತೆ ಮತ್ತು ಭೀಕರ ಬರಗಾಲದಿಂದ ತತ್ತರಿಸಿರುವ ಈ ನಾಡಿನ ಸಕಲ ಜೀವ ರಾಶಿಗಳನ್ನು ಸಂರಕ್ಷಿಸುವಂತೆ ಶ್ರೀ ದೇವರಲ್ಲಿ ಸಂಸದರು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ,ಮಂಡಲ ಅಧ್ಯಕ್ಷ ದೀಪಕ್ ಶೆಟ್ಟಿ ,ಪ್ರಮುಖರಾದ ಪ್ರಿಯದರ್ಶಿನಿ,ವೆಂಕಟೇಶ್ ಕಿಣಿ ಮತ್ತಿತರರು ಉಪಸ್ಥಿತರಿದ್ದರು.



















































































































































































































































































































































































































































































































































































































































































































































































































































































































































































































































































































































































































































































































































































































































































