ಏಪ್ರಿಲ್.4 ರಿಂದ ಶ್ರೀರಾಮ ಶ್ರೀ ಗಣಪತಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ತ್ರಾಸಿ,ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ
ಕುಂದಾಪುರ:ತಾಲೂಕಿನ ತ್ರಾಸಿ ಗ್ರಾಮದ ಶ್ರೀರಾಮ,
ಶ್ರೀ ಗಣಪತಿ,ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಏಪ್ರಿಲ್ 04 ರಿಂದ ಏಪ್ರಿಲ್ 05 ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ.ಶ್ರೀ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಏಪ್ರಿಲ್.04 ರಂದು ಗುರುವಾರ ಬ್ರಹ್ಮಕಲಶೋತ್ಸವ ವೈದಿಕ ವಿಧಾನ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ.
ಏಪ್ರಿಲ್ 05 ರಂದು ಶುಕ್ರವಾರ ಶ್ರೀರಾಮ, ಶ್ರೀ ಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ವೇದ ಮೂರ್ತಿ ಡಾ.ಭರತ್ ಐತಾಳ್ ಉಳ್ಳೂರು 11 ಅವರ ನೇತೃತ್ವದಲ್ಲಿ ಜರುಗಲಿದೆ.ಮಧ್ಯಾಹ್ನ ಅನ್ನಸಂತರ್ಪಣೆ ಜರುಗಲಿದೆ.
ಏಪ್ರಿಲ್ 06 ರಂದು ಶನಿವಾರ ಬ್ರಹ್ಮ ಕಲಶಾಭಿಷೇಕ,ಮಹಾ ಪೂಜೆ, ತೀರ್ಥ ಪ್ರಸಾದ ವಿತರಣೆ,ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.ಪರಮ ಪೂಜ್ಯ ಜಗದ್ಗುರು ಅನಂತ ಶ್ರೀ ವಿದೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಲಿದೆ.
ಸುಧಾಕರ ಆಚಾರ್ಯ ಮಾತನಾಡಿ, ಮೂರು ದಿನಗಳ ಕಾಲ ನಡೆಯುವ ದೇವತಾ ಕಾರ್ಯದಲ್ಲಿ ಊರ ಪರವೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗ ಬೇಕು ಎಂದು ಹೇಳಿದರು.
ರವಿ ಶೆಟ್ಟಿಗಾರ್ ತ್ರಾಸಿ ಮಾತನಾಡಿ,ಶ್ರೀರಾಮ ಶ್ರೀ ಗಣಪತಿ , ಶ್ರೀ ಅಯ್ಯಪ್ಪ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಏಪ್ರಿಲ್ 4 ರಿಂದ ಏಪ್ರಿಲ್ 6 ರಿಂದ ಅದ್ದೂರಿಯಾಗಿ ನಡೆಯಲಿದೆ ಎಂದರು,ಇವೊಂದು ದೇವತಾ ಕಾರ್ಯದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಹೇಳಿದರು.
ತಮ್ಮಯ್ಯ ದೇವಾಡಿಗ ಮಾತನಾಡಿ,ಶ್ರೀರಾಮ ಶ್ರೀ ಗಣಪತಿ ಶ್ರೀ ಅಯ್ಯಪ್ಪ ಸ್ವಾಮಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಮ್ಮ ಊರ ಹಬ್ಬದಂತೆ ಆಚರಿಸಲಾಗುತ್ತಿದೆ.ಎಲ್ಲರೂ ಸಡಗರ ಸಂಭ್ರಮದಿಂದ ಭಾಗವಹಿಸಬೇಕೆಂದು ವಿನಂತಿಸಿಕೊಂಡರು.
ಉದಯ ಶೆಟ್ಟಿ ಮಾತನಾಡಿ, ದೇವತಾ ಮತ್ತು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗದಲ್ಲಿ ಎಲ್ಲರೂ ಭಾಗವಹಿಸಬೇಕೆಂದರು.ಈ ಸಂದರ್ಭದಲ್ಲಿ ಸಮಿತಿ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.