ಶಿವಮೊಗ್ಗ ಲೋಕಸಭಾ ಚುನಾವಣೆ -ಕಾಂಗ್ರೆಸ್ ಕಾರ್ಯಕರ್ತರ ಸಭೆ
ಕುಂದಾಪುರ:ಬೈಂದೂರು ವಿಧಾನಸಭಾ ಕ್ಷೇತ್ರದ ಕಂಬದಕೋಣೆ ಗ್ರಾಮೀಣ ಕಾಂಗ್ರೆಸ್ ಘಟಕದ ವತಿಯಿಂದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕಂಬದಕೋಣೆಯಲ್ಲಿ ನಡೆಯಿತು.
ಕಾರ್ಯಕ್ರಮಕ್ಕೂ ಮುನ್ನ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮತ್ತು ನಟ ಶಿವರಾಜ್ ಕುಮಾರ್ ಅವರು ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ,ಬಿ.ಎಂ ಸುಕುಮಾರ್ ಶೆಟ್ಟಿ ಮತ್ತು ಇತರ ಮುಖಂಡರ ಜೊತೆ ಕಂಬದಕೋಣೆ ಗ್ರಾಮದ ಜಟಿಗೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ಕ್ಷೇತ್ರದೊಡೆಯನಲ್ಲಿ ಸರ್ವರ ಒಳಿತಿಗಾಗಿ ಪ್ರಾರ್ಥಿಸಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ,ಸಾಮಾಜಿಕ ಸೇವೆಯನ್ನು ಮಾಡಲು ಒಂದು ಅವಕಾಶ ನೀಡುವಂತೆ ಕೇಳಿಕೊಂಡರು.
ಈ ಸಂಧರ್ಭದಲ್ಲಿ ಖ್ಯಾತ ಚಲನಚಿತ್ರ ನಟರಾದ ಡಾ.ಶಿವರಾಜ್ ಕುಮಾರ್, ಮಾಜಿ ಶಾಸಕರುಗಳಾದ ಕೆ.ಗೋಪಾಲ ಪೂಜಾರಿ, ಬಿ.ಎಂ ಸುಕುಮಾರ್ ಶೆಟ್ಟಿ, ಶಿವಮೊಗ್ಗ ಲೋಕಸಭಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಬೈಂದೂರು ಉಸ್ತುವಾರಿ ಜಿ.ಎ ಭಾವ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರಾಜು ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅರವಿಂದ ಪೂಜಾರಿ, ಪ್ರದೀಪ್ ಶೆಟ್ಟಿ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
