ಕುಂದಾಪುರ

ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಯಿಂದ ಬಡವರಿಗೆ ಒಳಿತಾಗಿದೆ:ಗೀತಾ ಶಿವರಾಜ್ ಕುಮಾರ್

Share

ಬೈಂದೂರು: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಯ ಸವಲತ್ತು ಪಡೆಯುವ ಪ್ರತಿಯೊಬ್ಬ ನಾಗರೀಕರೂ ಕೂಡ ಸರ್ಕಾರದ ಪಾಲುದಾರು,ಗ್ಯಾರಂಟಿ ಯೋಜನೆಯಿಂದ ಬಡವರಿಗೆ ಒಳಿತಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.

ಬೈಂದೂರು ತಾಲ್ಲೂಕಿನ ತ್ರಾಸಿ ಅಣ್ಣಪ್ಪಯ್ಯ ಸಭಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿ ಪ್ರದೇಶದಲ್ಲಿ ಗ್ಯಾರಂಟಿ ಯೋಜನೆಗಳ ಪೂರೈಸಲು ಮಾಸಿಕ ₹50 ಲಕ್ಷ ಹಣ ಖರ್ಚಾಗುತ್ತಿದೆ.ಇಲ್ಲಿ ವಾರ್ಷಿಕ ₹6 ಕೋಟಿ ಹಣ ವ್ಯಯಿಸಬೇಕು.ಬಡವರಿಗೆ ನೆರವಾಗಬಲ್ಲ ಗ್ಯಾರಂಟಿ ಯೋಜನೆ ಕರ್ನಾಟಕ ರಾಜ್ಯ ಬಿಟ್ಟರೆ ದೇಶದ ಯಾವ ರಾಜ್ಯದಲ್ಲೂ ಇಂತಹ ಯೋಜನೆ ಇಲ್ಲ ಎಂದರು.

ರಾಜ್ಯದಲ್ಲಿ ₹58 ಸಾವಿರ ಕೋಟಿ ಹಣದ ಹೊರೆ ಸರ್ಕಾರಕ್ಕೆ ಆಗುತ್ತಿದೆ.ಆದರೂ, ಈ ಬಗ್ಗೆ ಯಾವುದೇ,ಒಳ ಒಪ್ಪಂದಕ್ಕೆ ಸರ್ಕಾರ ಸಿದ್ದವಿಲ್ಲ.ಜನ ಸಾಮಾನ್ಯರ ತೆರಿಗೆ ಹಣವನ್ನು ಪುನಃ ಜನರಿಗೆ ತಲುಪಿಸಲಾಗುತ್ತಿದೆ ಎನ್ನುವ ಸಂತಸ ಸರ್ಕಾರಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು, ತಮ್ಮ ಬದುಕಿನುದ್ದಕ್ಕೂ ಸಹ ಬಡವರು,ದಲಿತರು,ಶೋಷಿತ ವರ್ಗದವರ ಪರವಾಗಿಯೇ ಚಿಂತಿಸುತ್ತಿದ್ದರು.ಅಂದು, ಬಂಗಾರಪ್ಪ ಅವರು ಜನ ಸಾಮಾನ್ಯರಿಗೆ ನೀಡಿದ ಸೇವೆ, ಇಂದಿಗೂ ಜೀವಂತವಾಗಿವೆ ಎಂದರು.

ಬಂಗಾರಪ್ಪ ಅವರ,ಆರಾಧನ, ಗ್ರಾಮೀಣ ಕೃಪಾಂಕ,ಆಶ್ರಯ ಮತ್ತು ರೈತರ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಸೇರಿದಂತೆ ಅನೇಕ ಯೋಜನೆಗಳನ್ನು ಬಡವರಿಗೆ ಬದುಕಲು ನೆಲೆ ಕಲ್ಪಿಸಿಕೊಟ್ಟಿವೆ ಎಂದರು.

ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ, ದೇಶದಲ್ಲಿ ಬಿಜೆಪಿ ಆಡಳಿತದಿಂದ ಜನ ಸಾಮಾನ್ಯರು ಬದುಕು ನಡೇಸುವುದೇ ಶೋಚನೀಯ ಸ್ಥಿತಿಗೆ ತಲುಪಿದೆ ಎಂದರು.

ಮಾಜಿ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಮಾತನಾಡಿ,ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಮಲತಾಯಿ ಧೋರಣೆ ತೋರಿದ್ದಾರೆ.ಅಧಿಕಾರದ ಗದ್ದಿಗೆ ಏರಿ 15 ವರ್ಷ ಕಳೆದವು.ಆದರೆ,ಕ್ಷೇತ್ರ ಮಾತ್ರ ಕತ್ತಲಲ್ಲಿ ಮುಳುಗಿದೆ ಎಂದು ದೂರಿದರು.
ಡಾ.ಶಿವರಾಜ್ ಕುಮಾರ್ ಮಾತನಾಡಿ,ಚಿಕ್ಕ ವಯಸ್ಸಿನಿಂದ ಪತ್ನಿ ಗೀತಾ ಅವರು ಬಂಗಾರಪ್ಪ ಅವರ ರಾಜಕೀಯ ಚಟುವಟಿಕೆಗಳನ್ನು ಹತ್ತಿರದಿಂದ ನೋಡಿ ಬೆಳೆದಿದ್ದಾರೆ.ಬಂಗಾರಪ್ಪ ಅವರು, ಎಲ್ಲಾ ಧರ್ಮ, ಸಮುದಾಯಗಳನ್ನು ಪ್ರೀತಿಯಿಂದ ಕಾಣುತ್ತಿದ್ದರು. ಅದೇ ಗುಣ ಗೀತಾ ಅವರಿಗೆ ಬಂದಿದೆ.ಜಿಲ್ಲೆಯಲ್ಲಿ ಬಂಗಾರಪ್ಪ ಅವರ ಋಣ ತೀರಿಸಲು ಒಂದು ಅವಕಾಶ ಕಲ್ಪಿಸಿಕೊಡಿ ಎಂದು ಕೇಳಿಕೊಂಡರು.

ಪ್ರಮುಖರಾದ ರಾಜು ಪೂಜಾರಿ,ಪ್ರದೀಪ್ ಕುಮಾರ್ ಶೆಟ್ಟಿ,ಅರವಿಂದ ಪೂಜಾರಿ, ಹರೀಶ್ ಕೊಡಪಾಡಿ, ಚಂದ್ರ ಶೇಖರ ಪೂಜಾರಿ,ಮಂಜುಳ ದೇವಾಡಿಗ ಸೇರಿ, ರಾಜು ದೇವಾಡಿಗ,ಅನಂತ ಮೊವಾಡಿ ಮತ್ತಿತರರು ಉಪಸ್ಥಿತರಿದ್ದರು.
ಅನಂತ ಮೊವಾಡಿ ಸ್ವಾಗತಿಸಿ.ಪ್ರಾಸ್ತಾವಿಕವಾಗಿ ಮಾತನಾಡಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago