ಮಾಜಿ ಶಾಸಕರೇ ಸಮುದಾಯ ಭವನ ಅನುದಾನ ತಡೆಹಿಡಿದಿದ್ದಾರೆ:ಪ್ರಿಯದರ್ಶಿನಿ ದೇವಾಡಿಗ ಆರೋಪ

Share

ಕುಂದಾಪುರ:ವಿಶ್ವ ನಾಯಕ ಭಾರತ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವ ಹಾಗೂ ಸಂಸದರಾದ ಬಿ.ವೈ. ರಾಘವೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಹತ್ತು ವರ್ಷದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾರ್ಯಗಳು ನಡೆದಿದೆ ಎಂದು ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು.
ಬೈಂದೂರು ಅಂಬಿಕಾ ಇಂಟರ್ನ್ಯಾಷನಲ್ ಹೊಟೇಲ್ ನಲ್ಲಿ ಸೋಮವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳ ಸಂಪರ್ಕ ರಸ್ತೆಯನ್ನು ಸಂಪೂರ್ಣವಾಗಿ ಕಾಂಕ್ರೀಟಿಕರಣ ಮಾಡುವುದರ ಮುಖೇನ ಅಭಿವೃದ್ಧಿಗೊಳಿಸಲಾಗಿದೆ. ಮರವಂತೆ,ಕೊಡೇರಿ,ಗಂಗೊಳ್ಳಿ ಹಾಗೂ ಶಿರೂರು ಅಳ್ವೆಗದ್ದೆಯಲ್ಲಿ ಬಂದರು ನಿರ್ಮಾಣ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಯ ಜೊತೆ ಜೊತೆಗೆ ಕ್ಷೇತ್ರದಲ್ಲಿ ಬರುವ ಎಲ್ಲ ಸಮುದಾಯಗಳ ಅಭಿವೃದ್ಧಿಗೂ ಕ್ರಮ ವಹಿಸಲಾಗಿದೆ.ಸಮುದಾಯ ಭವನಗಳ ನಿರ್ಮಾಣ, ದೇವಸ್ಥಾನಗಳಲ್ಲಿ ಸಭಾಂಗಣ ನಿರ್ಮಾಣ ಕಾಮಗಾರಿಗೆ ವಿಶೇಷ ಅನುದಾನ ಒದಗಿಸಲಾಗಿದೆ.

ದೇವಾಡಿಗರ ಸಮುದಾಯ ಭವನಕ್ಕೆ 1 ಕೋ.ರೂ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿರುವ ಮಾನ್ಯ ಸಂಸದರಾದ ಬಿ.ವೈ.ರಾಘವೇಂದ್ರ ಅವರು ವಿಶೇಷ ಮುತುವರ್ಜಿ ವಹಿಸಿ ನೀಡಿದ್ದಾರೆ.ಸುಮಾರು 5 ಕೋಟಿ ವೆಚ್ಚದಲ್ಲಿ ಕರ್ನಾಟಕದ ನೀರಾವರಿ ನಿಗಮದ ಮೂಲಕ 15 ಕಾಮಗಾರಿಗಳನ್ನು ಕ್ಷೇತ್ರಕ್ಕೆ ತಂದುಕೊಟ್ಟಿದ್ದಾರೆ.ಅದೆಲ್ಲವೂ ಸಮುದಾಯ ಭವನ ಸಂಬಂಧಿಸಿದ್ದಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕರಾದ ಗೋಪಾಲ ಪೂಜಾರಿಯವರು ಒಂದು ಪ್ರಶ್ನೆಯನ್ನುತ್ತಿದ್ದರು.ಈ ಕ್ಷೇತ್ರಕ್ಕೆ ಸಂಸದರಾದ ಬಿ.ವೈ. ರಾಘವೇಂದ್ರ ಅವರ ಕೊಡುಗೆಯನ್ನು ಮತ್ತು ದೇವಾಡಿಗರ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.ಇದು ಸತ್ಯಕ್ಕೆ ದೂರವಾದ ಮಾತು ಎಂದು ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಿಯದರ್ಶಿನಿ ದೇವಾಡಿಗ ಅವರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರ ಹೇಳಿಕೆಗೆ ಸ್ಪಷ್ಟೀಕರಣ ನೀಡಿ ಮಾತನಾಡಿ,
15 ವರ್ಷ ಶಾಸಕರಾಗಿದ್ದವರು ಓರ್ವ ಸಂಸದರ ಬಗ್ಗೆ ಮಾತಾಡುವಾಗ ಆಲೋಚನೆ ಮಾಡಬೇಕು.ಏಕವಚನದಲ್ಲಿ ಮಾತಾಡುವುದು ಸರಿಯಲ್ಲ
ದೇವಾಡಿಗ ಸಮಾಜಭವನ ನಿರ್ಮಾಣಕ್ಕೆ ಮಂಜೂರಾದ ಅನುದಾನವನ್ನು ತಡೆ ಹಿಡಿದವರು ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ ಅವರೇ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಪಕ್ಷದ ಮುಖಂಡರಾದ ಬಿ ರಾಜಶೇಖರ್, ಕೃಷ್ಣ ದೇವಾಡಿಗ, ಅಶೋಕ್ ದೇವಾಡಿಗ,ಚಂದ್ರ ದೇವಾಡಿಗ ಉಪಸ್ಥಿತರಿದ್ದರು.
ಬೈಂದೂರು ಬಿಜೆಪಿ ಮಂಡಲ ಖಜಾಂಚಿ ಶ್ರೀಗಣೇಶ ಗಾಣಿಗ ಉಪ್ಪುಂದ ನಿರ್ವಹಿಸಿದರು.

Advertisement

Share

Leave a comment

Your email address will not be published. Required fields are marked *

You cannot copy content of this page