ಶ್ರೀ ರಜತ ಕವಚ ಸಮರ್ಪಣೆ ಪುರಮೆರವಣಿಗೆ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ದೇವಸ್ಥಾನದಲ್ಲಿ ಏಪ್ರಿಲ್ 10 ರಿಂದ ಏಪ್ರಿಲ್ 22 ರ ತನಕ ನಡೆಯಲಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀರಾಮ ದೇವರಿಗೆ ಸಮರ್ಪಣೆ ಮಾಡಲಿರುವ ರಜತ ಕವಚ ಪುರ ಮೆರವಣಿಗೆ ಬುಧವಾರ ವಿಜೃಂಭಣೆಯಿಂದ ನಡೆಯಿತು.
ತ್ರಾಸಿ ಸರ್ಕಲ್ ನಿಂದ ಶ್ರೀರಾಮ ಮಂದಿರ ವರೆಗೆ ಭವ್ಯ ಮೆರವಣಿಗೆ ಸಾಗಿತು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು ಸದಸ್ಯರು, ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಧ್ಯಕ್ಷರು ಮತ್ತು ಮಹಿಳಾ ಸಮಿತಿ ಅಧ್ಯಕ್ಷರು,ಸದಸ್ಯರು ಉಪಸ್ಥಿತರಿದ್ದರು.



















































































































































































































































































































































































































































































































































































































































































































































































































































































































































































































































































































































































































































































































































































































































































