ಕುಂದಾಪುರ

ಎಕ್ಸಲೆಂಟ್ ಕಾಲೇಜು ಕುಂದಾಪುರ ತಾಲೂಕಿಗೆ ಗರಿಷ್ಠ ಸಾಧನೆ.

Share

ಕುಂದಾಪುರ:2023-240 ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರದ ಎಕ್ಸಲೆಂಟ್
ಪಪೂ ಕಾಲೇಜಿಗೆ ರಾಜ್ಯಮಟ್ಟದಲ್ಲಿ 13 ಸ್ಥಾನಗಳು ಬಂದಿದ್ದು, ಶೇ.1೦೦ ಫಲಿತಾಂಶ ಲಭಿಸಿದೆ. ಅತೀ ಹೆಚ್ಚು ರ‍್ಯಾಂಕ್‌ಗಳನ್ನು ಪಡೆದ ಕುಂದಾಪುರದ ಏಕೈಕ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಸಂಸ್ಥೆಯಲ್ಲಿ ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಿದ್ದು ಒಟ್ಟು 404 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.1೦೦ ಫಲಿತಾಂಶ ಬರುವುದರೊಂದಿಗೆ ವಿಜ್ಞಾನ ವಿಭಾಗದಲ್ಲಿ ೦8 ಸ್ಥಾನಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ ೦5 ಸ್ಥಾನಗಳನ್ನು ರಾಜ್ಯಮಟ್ಟದಲ್ಲಿ ಗಳಿಸುವುದರ ಮೂಲಕ ಸಂಸ್ಥೆಯ ಕೀರ್ತಿ ಕಳಶಕ್ಕೆ ಇನ್ನು ಹೊಳಪು ನೀಡಿದ್ದಾರೆ.
ಸಂಸ್ಥೆಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಚಿರಾಗ್ 592 ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ 7ನೇ ಸ್ಥಾನ, ಅನನ್ಯ ಉಡುಪ 590 ಅಂಕಗಳೊಂದಿಗೆ 6ನೇ ಸ್ಥಾನ, ನಾಗರಾಜ ಉಪ್ಪಾರ್ 590 ಅಂಕಗಳೊಂದಿಗೆ 9ನೇ ಸ್ಥಾನ, ರಕ್ಷಾ ಆರ್ ಪೂಜಾರಿ 590 ಅಂಕಗಳೊಂದಿಗೆ 9ನೇ ಸ್ಥಾನ, ನಿಶಾ 589,1೦ ನೇ ಸ್ಥಾನ, ನಿರ್ಮಿತಾ ಎನ್. ಡಿ 588 ಅಂಕಗಳೊಂದಿಗೆ 11 ನೇ ಸ್ಥಾನ, ವಿನುತಾ 588 ಅಂಕಗಳೊAದಿಗೆ 11ನೇ ಸ್ಥಾನ, ಸನ್ನಿದಿ ಕುಲಾಲ್ 588 ಅಂಕಗಳೊAದಿಗೆ 11 ನೇ ಸ್ಥಾನ,ಪಡೆದುಕೊಂಡಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 315 ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇಕಡ 1೦೦ ಫಲಿತಾಂಶ ಬಂದಿದೆ 246 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 68 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.
ಹಾಗೇ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ರಿತನ್ಯ ನಾಯ್ಕ 591 ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ 7 ನೇ ಸ್ಥಾನ , ಹರ್ಷಿತಾ ಡಿ. ಎಸ್ 591 ಅಂಕಗಳೊಂದಿಗೆ 7 ನೇ ಸ್ಥಾನ , ಸಿಂಚನಾ ಎಸ್ ಬಸ್ರೂರು 589 ಅಂಕಗಳೊಂದಿಗೆ 9 ನೇ ಸ್ಥಾನ, ಸಿಂಚನಾ ಎಸ್ ಶೆಟ್ಟಿ 589 ಅಂಕಗಳೊಂದಿಗೆ 9 ನೇ ಸ್ಥಾನ, ಭೂಮಿಕಾ 588 ಅಂಕಗಳೊಂದಿಗೆ 1೦ ನೇ ಸ್ಥಾನಗಳನ್ನು ಪಡೆಯುದರ ಮೂಲಕ ಅತ್ಯುತ್ಕೃಷ್ಟ ಸಾಧನೆ ಮಾಡಿ ಸಂಸ್ಥೆಯ ಪ್ರತಿಷ್ಟೆಗೆ ಇನ್ನೂ ಮೆರುಗು ನೀಡಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 89 ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇಕಡ 1೦೦ ಫಲಿತಾಂಶ ಬಂದಿದೆ. 62 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.
ರಾಜ್ಯಮಟ್ಟದಲ್ಲಿ ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಎ೦ .ಎ೦ ಹೆಗ್ಡೆ ಎಜುಕೇಶನಲ್ ಹಾಗೂ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾಗಿರುವ ಶ್ರೀ ಎಂ ಮಹೇಶ್ ಹೆಗ್ಡೆಯವರು ಹಾಗೂ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾಗಿರುವ ಡಾ ರಮೇಶ್ ಶೆಟ್ಟಿಯವರು, ಕಾರ್ಯದರ್ಶಿ ಶ್ರೀ ಪ್ರತಾಪ್‌ಚಂದ್ರ ಶೆಟ್ಟಿಯವರು, ಖಜಾಂಚಿ ಶ್ರೀ ಭರತ್ ಶೆಟ್ಟಿಯವರು, ಹಾಗೂ ಉಪನ್ಯಾಸಕರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago