ಕುಂದಾಪುರ

ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಸರಣಿ ಅಪಘಾತ,ನಾಲ್ವರಿಗೆ ಗಾಯ

Share

ಕುಂದಾಪುರ:ತಾಲೂಕಿನ ಗಂಗೊಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯ ಹೊಸಾಡು-ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಶುಕ್ರವಾರ ಸಂಭವಿಸಿದ ಗೂಡ್ಸ್ ಲಾರಿ,ಕಾರು,ರಿಕ್ಷಾ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.ತಾಯಿ ಜತೆ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಏಳು ತಿಂಗಳ ಹಸುಗೂಸು ಪವಾಡಸದೃಶವಾಗಿ ಪಾರದ ಘಟನೆ ನಡೆದಿದೆ.
ಕುಂದಾಪುರ ಕಡೆಯಿಂದ ಮುಳ್ಳಿಕಟ್ಟೆ ಮಾರ್ಗವಾಗಿ ಬಂಟ್ವಾಡಿ ಕಡೆಗೆ ಸಾಗುತ್ತಿದ್ದ ಕಾರನ್ನು ಚಾಲಕ ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಅಜಾಗರೂಕತೆಯಿಂದ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಸಮಯದಲ್ಲಿ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ವೇಗವಾಗಿ ಸಾಗುತ್ತಿದ್ದ ಗೂಡ್ಸ್ ಲಾರಿ ಡಿಕ್ಕಿ ಹೊಡೆದಿದೆ.ಅದೆ ಸಮಯದಲ್ಲಿ ತ್ರಾಸಿ ಕಡೆಗೆ ಸಾಗಲು ಮುಳ್ಳಿಕಟ್ಟೆ ಸರ್ಕಲ್ ಬಳಿ ನಿಲ್ಲಿಸಿಕೊಂಡಿದ್ದ ರಿಕ್ಷಾದ ಮುಂಭಾಗಕ್ಕೆ ಕಾರು ಗುದ್ದಿದೆ.ಅಪಘಾತದ ರಭಸಕ್ಕೆ ರಾಘವೇಂದ್ರ ಪೂಜಾರಿ ಎಂಬುವವರ ರಿಕ್ಷಾದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ,ಕಾರಿಗೂ ಹಾನಿಯಾಗಿದೆ.ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅಜ್ಜಿ ಸೇರಿ ಓರ್ವ ಮಹಿಳೆಗೆ ಗಾಯವಾಗಿದೆ.ಕಾರಿನಲ್ಲಿದ್ದ ಒಬ್ಬ ಮಹಿಳೆಗೆ ಗಂಭೀರ ಸ್ವರೂಪದ ಗಾಯವಾಗಿದೆ.ಸರಣಿ ಅಪಘಾತದಲ್ಲಿ ರಿಕ್ಷಾ ಚಾಲಕ ಸಹಿತ ಒಟ್ಟು ನಾಲ್ವರು ಗಾಯಗೊಂಡಿದ್ದಾರೆ.ಗಂಗೊಳ್ಳಿ ಠಾಣೆ ಪಿಎಸ್‍ಐ ಹರೀಶ್ ಆರ್ ಮತ್ತು ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿದರು.ಗಾಯಾಳುಗಳನ್ನು ತಕ್ಷಣದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವುದರ ಮುಖೇನ ಮುಳ್ಳಿಕಟ್ಟೆ ಶಂಕರನಾಗ್ ಆಟೋಸ್ಟ್ಯಾಂಡ್ ರಿಕ್ಷಾ ಚಾಲಕರು ಮಾನವೀಯತೆ ಮೆರೆದಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago