ಬೈಂದೂರು:ಹಿಂದುಳಿದ ಬೈಂದೂರು ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅವರ ಕೊಡುಗೆ ಅಪಾರವಾದದ್ದು,ಬಿಜೆಪಿ ಭದ್ರಕೋಟೆ ಬೈಂದೂರು ಕ್ಷೇತ್ರದಲ್ಲಿ ಈಶ್ವರಪ್ಪನವರ ಆಟ ಎಂದಿಗೂ ನಡೆಯುವುದಿಲ್ಲ ಎಂದು ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು.
ಗುರುವಾರ ಬೈಂದೂರುನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಎಲ್ಲ ರೀತಿಯಲ್ಲೂ ಅನುಕೂಲ ಪಡೆದವರೆ ಇದೀಗ ಸಂಸದರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂಬುದೂ ತಿಳಿದಿದೆ.ಅಭಿವೃದ್ಧಿ ಮತ್ತು ಹಿಂದುತ್ವದ ವಿಚಾರದಲ್ಲಿ ನಮ್ಮ ಸಂಸದರನ್ನು ಪ್ರಶ್ನಿಸುವ ನೈತಿಕತೆ ಕೆ.ಎಸ್.ಈಶ್ವರಪ್ಪ ಅವರಿಗೆ ಇಲ್ಲ ಎಂದರು.
ಈಶ್ವರಪ್ಪನವರ ಬಗ್ಗೆ ನಮಗೆ ಗೌರವವಿದೆ.ಆದರೂ ಕೆಲವೊಂದು ವಿಷಯವನ್ನು ಅವರಿಗೆ ಮನವರಿಕೆ ಮಾಡಿಕೊಡಬೇಕಾಗಿದೆ. ಸಂಸದರಾಗಿ ಬಿ.ವೈ.ರಾಘವೇಂದ್ರ ಅವರು ಅದ್ಭುತವಾದ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಮತ್ತು ನಮ್ಮ ಕಾರ್ಯಕರ್ತರನ್ನು ಅಷ್ಟೇ ಗೌರವಯುತವಾಗಿ ನಡೆಸಿಕೊಂಡು ಬಂದಿದ್ದಾರೆ. ಬೈಂದೂರಿನಲ್ಲಿ ತಿರುಗಾಡಿದ ತಕ್ಷಣ ಈಶ್ವರಪ್ಪ ಅವರಿಗೆ ಯಾವುದೇ ಮತ ಬರುವುದಿಲ್ಲ. ಹಣ ಅಥವಾ ಯಾವುದೇ ಆಮಿಷಕ್ಕೂ ಯಾರೂ ಮರಳಾಗುವುದಿಲ್ಲ.ನಮ್ಮ ಕಾರ್ಯಕರ್ತರು ಯಾರೂ ಅವರೊಂದಿಗೆ ಇಲ್ಲ ಮತ್ತು ಮತದಾರರಲ್ಲೂ ಯಾವುದೇ ಗೊಂದಲ ಇಲ್ಲ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೈಕಲ್ ನಲ್ಲಿ ಸುತ್ತಾಡಿ ಪಕ್ಷ ಕಟ್ಟಿದ್ದಾರೆ.ಯಡಿಯೂರಪ್ಪ ಅವರ ಮಕ್ಕಳು ಎನ್ನುವ ಕಾರಣಕ್ಕೆ ಅವರಿಗೆ ಟಿಕೆಟ್ ನೀಡಿಲ್ಲ.ಅವರು ಮಾಡಿದ ಅಭಿವೃದ್ಧಿ ಕಾರ್ಯ ಗಮನಿಸಿ ಜನರ ನಡುವಿನ ಒಡನಾಟ ನೋಡಿಕೊಂಡು ಪಕ್ಷ ಟಿಕೆಟ್ ನೀಡಿದೆ.ಬಿ.ಎಸ್.ಯಡಿಯೂರಪ್ಪ ಅಥವಾ ಅವರ ಮಕ್ಕಳು ಹಿಂದುತ್ವ ವಿಚಾರ ಬಂದಾಗ ಸದಾ ಸಂಘಟನೆ ಜತೆಗೆ ಇರುತ್ತಾ ಬಂದಿದ್ದಾರೆ.
ಬಿ.ವೈ.ರಾಘವೇಂದ್ರ ಅವರು ಕೂಡ ಮಾಜಿ ಮುಖ್ಯಮಂತ್ರಿ ಮಗ ಎಂದು ಬೆಂಗಳೂರಿನಲ್ಲಿ ಕುಳಿತು ಆಡಳಿತ ನಡೆಸಿಲ್ಲ. ಕ್ಷೇತ್ರದಲ್ಲಿದ್ದು,ಜನರ ಮಧ್ಯೆಯೇ ಓಡಾಡಿಕೊಂಡಿದ್ದರು.ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು
ಸಂಸದರಾಗಿ ರಾಘವೇಂದ್ರ ಅವರು ಮಾಡಿದ ಅಭಿವೃದ್ಧಿ ಕಾರ್ಯದ ಆಧಾರದಲ್ಲಿ ಕಳೆದ ಬಾರಿ ಕ್ಷೇತ್ರದ ಜನತೆ 74 ಸಾವಿರ ಲೀಡ್ ನೀಡಿದ್ದು, ಈ ಬಾರಿ 1 ಲಕ್ಷ ಲೀಡ್ ನೀಡುವ ಉತ್ಸಾಹದಲ್ಲಿದ್ದಾರೆ. ಮೀನುಗಾರಿಕೆ,
ಪ್ರವಾಸೋದ್ಯಮ, ಕಿಂಡಿಅಣೆಕಟ್ಟು, ಸಮುದಾಯಗಳ ಅಭಿವೃದ್ಧಿ ಹೀಗೆ ಎಲ್ಲ ಕ್ಷೇತ್ರಗಳಿಗೂ ಸಂಸದರು ಆದ್ಯತೆ ನೀಡಿದ್ದಾರೆ.
ದೇವಾಡಿಗರ ಸಮುದಾಯ ಭವನ ನಿರ್ಮಾಣಕ್ಕೆ ಈ ಹಿಂದೆ ಬಂದಿದ್ದ 1 ಕೋಟಿ ರೂ. ತಾಂತ್ರಿಕ ಕಾರಣದಿಂದ ವಾಪಸ್ ಹೋಗಿದೆ.ನಂತರ ಮತ್ತೊಮ್ಮೆ ಬಿಡುಗಡೆಯಾದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಹಣ ನೀಡಿಲ್ಲ.ಮುಂದೆ ಖಂಡಿತ ಸಂಸದರು ದೇವಾಡಿಗರ ಭವನ ಮಾಡಿಸಲಿದ್ದಾರೆ.ದೇವಾಡಿಗ ಸಮುದಾಯಕ್ಕೆ ಅನ್ಯಾಯವಾಗಲು ಬಿಜೆಪಿ ಬಿಡುವುದಿಲ್ಲ ಎಂದರು.
ಕಾಂಗ್ರೆಸ್ ನಾಯಕರಿಗೆ ಪ್ರಿಯದರ್ಶಿನಿ ತಿರುಗೇಟು
ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಮಾತನಾಡಿ, ದೇವಾಡಿಗರ ಸಮುದಾಯ ಭವನ ನಿರ್ಮಾಣಕ್ಕೆ ಬಿಜೆಪಿ ಸರಕಾರ ನೀಡಿರುವ ಅನುದಾನ ಬಗ್ಗೆ ನಾನೇನು ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ಧನಾಗಿದ್ದೇನೆ. ರಾಜಕೀಯ ವ್ಯವಸ್ಥೆಯಲ್ಲಿ ಎಲ್ಲರಿಗೂ ಉತ್ತರ ನೀಡಲು ಸಾಧ್ಯವಿಲ್ಲ.ಆದರೆ, ಹಿರಿಯರಾದ ಗೌರಿ ದೇವಾಡಿಗ ಅವರು ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದ ಹೇಳಿಕೆಗೆ ಮಾತ್ರ ಉತ್ತರ ಕೊಡಲೇ ಬೇಕು.ಗೌರಿ ದೇವಾಡಿಗ ಅವರನ್ನು ಜಿ.ಪಂ., ತಾ.ಪಂ ಸದಸ್ಯೆ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿಸಿದ್ದು ಬಿಜೆಪಿ, ಅಧಿಕಾರ ಅನುಭವಿಸಿ ಪಕ್ಷ ಬಿಟ್ಟು ಹೋದರು.
ಅವರಿಂದ ನನಗೆ ರಾಜಕೀಯ ಪಾಠದ ಅಗತ್ಯವಿಲ್ಲ.ಗೋಪಾಲ ಪೂಜಾರಿಯವರು ಕಾಂಗ್ರೆಸ್‌ಗೆ ಬರುವ ಮೊದಲೇ ನನ್ನ ಅಮ್ಮ ಕಾಂಗ್ರೆಸ್‌ನಲ್ಲಿದ್ದರು.30 ವರ್ಷ ಕಾರ್ಯಕರ್ತೆಯಾಗಿ ಕೆಲಸ ಮಾಡಿದ್ದರು.ಬೇರೆ ಪಕ್ಷದಿಂದ ಕಾಂಗ್ರೆಸ್ ಬಂದಿದ್ದ ಗೋಪಾಲ್ ಪೂಜಾರಿಯವರನ್ನು ಶಾಸಕರನ್ನಾಗಿಸಲು ಶಾರದಾ ಬಿಜೂರು ಕೆಲಸ ಮಾಡಿದ್ದಾರೆ. ಹೀಗಾಗಿ ಶಾರದಾ ಬಿಜೂರ್ ಅವರ ಮೇಲೆ ಗೋಪಾಲ ಪೂಜಾರಿ ಋಣ ಇಲ್ಲ ಎಂದು ಗೌರಿ ದೇವಾಡಿಗ ಹಾಗೂ ಗೋಪಾಲ್ ಪೂಜಾರಿಯವರಿಗೆ ತಿರುಗೇಟು ನೀಡಿದರು.
ನಮಗೆ ಪಕ್ಷದ ಋಣವಿದೆಯೇ ಹೊರತು ವ್ಯಕ್ತಿಯ ಋಣ ಅಲ್ಲ
ನಾವ್ಯಾರೂ ರೊಟ್ಟಿ,ಇಡ್ಲಿಗಾಗಿ ರಾಜಕೀಯಕ್ಕೆ ಬಂದಿಲ್ಲ.ನಮ್ಮ ಮನೆಯಲ್ಲಿ ಎಲ್ಲರೂ ಉದ್ಯೋಗಸ್ಥರು ನಮಗೆ ಪಕ್ಷದ ಋಣ ಇದೆಯೇ ಹೊರತು ಯಾವ ವ್ಯಕ್ತಿಯ ಋಣ ಇಲ್ಲ. ಪ್ರಾಧ್ಯಪಕನಿಗೆ ತಾನು ಯಾವ ಪಕ್ಷಕ್ಕೂ ಬಹಿರಂಗ ಬೆಂಬಲ ನೀಡಬಾರದು ಎಂಬ ಸಾಮಾನ್ಯ ಪರಿಜ್ಞಾನ ಇರಬೇಕು ಎಂದು ಜಗದೀಶ್ ದೇವಾಡಿಗ ಹಾಗೂ ಮಣಿಕಂಠ ದೇವಾಡಿಗರಿಗೆ ತೀಕ್ಷ್ಮ ಪ್ರತಿಕ್ರಿಯೆ ನೀಡಿದರು.
ನಕಾರಾತ್ಮಕ ಹೇಳಿಕೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ.ಅಭಿವೃದ್ಧಿ ವಿಷಯದಲ್ಲಿ ಚರ್ಚೆಗೆ ಸಿದ್ಧರಿದ್ದೆವೆ.ಕಾಂಗ್ರೆಸ್ ನವರು ಸೋಲಿನ ಹತಾಶೆಯಿಂದ ಹೀಗೆಲ್ಲ ಮಾತಾಡುತ್ತಿದ್ದಾರೆ. ಯಾವ ವ್ಯಕ್ತಿಯನ್ನು ವೈಯಕ್ತಿಕ ನೆಲೆಯಲ್ಲಿ ಟೀಕೆ ಮಾಡುವವರು ನಾವಲ್ಲ.ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದ ಟೀಕೆಗಳನ್ನು ಮಾತ್ರ ಮಾಡುತ್ತೇವೆ.ಆದರೆ,ಗೌರಿ ದೇವಾಡಿಗ ಅವರು ವೈಯಕ್ತಿಕವಾಗಿ ಟೀಕಿಸಿದ್ದರಿಂದ ಅವರಿಗೆ ಈ ಪ್ರಶ್ನೆ,ಗೋಪಾಲ್ ಪೂಜಾರಿಯವರು ಇತ್ತೀಚಿಗೆ ನೀಡಿದ ಹೇಳಿಕೆ ಬಗ್ಗೆ ನಿಮ್ಮ ನಿಲುವೇನು? ಕಾಂಗ್ರೆಸ್ ಪಕ್ಷದಿಂದ ನಿಮ್ಮ ಬೆನ್ನಿಗೆ ಬುಲೆಟ್ ಇಟ್ಟು ಹೇಳಿಕೆ ನೀಡುವಂತೆ ಮಾಡಿದವರು ಯಾರು ಎಂಬುದನ್ನು ಹೇಳಿ ಬಿಡಿ ಮತ್ತು ಕಾಂಗ್ರೆಸ್ ಪಕ್ಷದ ಬಗ್ಗೆ ನಿಮ್ಮ ನಿಲುವೇನು?.
ಉಕ್ಕಿನಷ್ಟೇ ಬಲಿಷ್ಠ
ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಯ ಮೂಲಕ ಮಾಡುವ ಯಾವ ಕಾಮೆಂಟ್ ಗಳಿಗೂ ಪ್ರತಿಕ್ರಿಯ ನೀಡುವುದಿಲ್ಲ. ಏನೇ ಇದ್ದರು ನೇರ ಬಂದು ಹೇಳಿ ಉತ್ತರ ನೀಡುವೆ.ಉಕ್ಕಿನಷ್ಟೇ ಬಲಿಷ್ಠವಾಗಿದ್ದೇನೆ ಮತ್ತು ಅಷ್ಟು ಬೇಗ ಗುಜರಿಯೂ ಆಗುವುದಿಲ್ಲ ಎಂದು ಖಡಕ್ ಉತ್ತರ ನೀಡಿದರು.
ಹಿಂದೂಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುನಾಥ ದೇವಾಡಿಗ,ಮಂಡಲ ಖಜಾಂಚಿ ಗಣೇಶ್ ಗಾಣಿಗ ಉಪಸ್ಥಿತರಿದ್ದರು.
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…