ಕುಂದಾಪುರ:ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಾಡು-ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ನಾವುಂದ ಗ್ರಾಮದ ರೂಪ ಗಾಣಿಗ (32) ಅವರು ರಸ್ತೆ ದಾಟುತ್ತಿದ್ದ ಸಮಯದಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ವೇಗದಿಂದ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆ ದಾಖಲಾದ ಘಟನೆ ಶನಿವಾರ ನಡೆದಿದೆ.
ಏಪ್ರಿಲ್ 12 ರ ಶುಕ್ರವಾರದಂದು ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಮಹಿಳೆಯರು ಸಹಿತ ಒಟ್ಟು ನಾಲ್ಕು ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಪದೆ ಪದೆ ಅಪಘಾತ ಸಂಭವಿಸುತ್ತಿದ್ದರು ಜಿಲ್ಲಾಡಳಿತ ಮತ್ತು ರಸ್ತೆಯನ್ನು ಗುತ್ತಿಗೆ ಪಡೆದುಕೊಂಡಿದ್ದ ಐಆರ್‍ಬಿ ಕಂಪನಿ ಅವರು ವಾಹನ ಸವಾರರು ಮತ್ತು ಸಾರ್ವಜನಿಕರ ಜೀವದ ಹಿತ ದೃಷ್ಟಿಯಿಂದ ಯಾವುದೆ ರೀತಿ ಸುರಕ್ಷತಾ ಕ್ರಮಗಳನ್ನು ಕೈಂಗೊಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಹಂಪ್ ಅಳವಡಿಕೆಗೆ ಆಗ್ರಹ:ಮುಳ್ಳಿಕಟ್ಟೆ ಸರ್ಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಸಹಿತ ಹಂಪ್ ಅಳವಡಿಕೆ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…