ಶ್ರೀ ನಿಜಶರಣ ಅಂಬಿಗರ ಚೌಡಯ್ಯ,ಜಗದ್ಗುರು ಶ್ರೀಶಾಂತ ಭೀಷ್ಮ ಚೌಡಯ್ಯ ಮಹಾಸ್ವಾಮಿಗಳಿಗೆ ಅದ್ದೂರಿ ಸ್ವಾಗತ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ದೇವಸ್ಥಾನದ ಸುವರ್ಣ ಮಹೋತ್ಸವ ಅಂಗವಾಗಿ ಶ್ರೀರಾಮ ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮ ಹೋಮ,ಭಜನಾ ಕಾರ್ಯಕ್ರಮ,ಅನ್ನಸಂತರ್ಪಣೆ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸೋಮವಾರ ನಡೆಯಿತು.
ಶ್ರೀನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ ನರಸೀಪುರ ಹಾವೇರಿ ಜಗದ್ಗುರು ಶ್ರೀಶಾಂತ ಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ಅವರನ್ನು ತ್ರಾಸಿ ಸರ್ಕಲ್‍ನಿಂದ ಶ್ರೀರಾಮ ದೇವಸ್ಥಾನದ ವರೆಗೆ ಪೂರ್ಣ ಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು,ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷರು ಮತ್ತು ಗೌರವಾಧ್ಯಕ್ಷರು,ಮಹಿಳಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.