ಕುಂದಾಪುರ:ತಾಲೂಕಿನ ಸೇನಾಪುರ ಗ್ರಾಮದ ಬೆಳ್ಳಾಡಿ ಶ್ರೀ ಯಕ್ಷೇಶ್ವರಿ ದೇವಸ್ಥಾನದ ಎರಡನೇ ವರ್ಷದ ವರ್ಧಂತ್ಯೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.
ಶ್ರೀಯಕ್ಷೇಶ್ವರಿ ಮತ್ತು ಸಹ ಪರಿವಾರ ದೇವರ ವರ್ಧಂತ್ಯೋತ್ಸವ ಅಂಗವಾಗಿ ಶ್ರೀದೇವಿಗೆ ಹೂವಿನ ಅಲಂಕಾರ ಪೂಜೆ,ಮಂಗಳಾರತಿ ಸೇವೆ, ಅನ್ನದಾನ,ಜೋಡು ಮೇಳದ ಯಕ್ಷಗಾನ ಬಯಲಾಟ ಹಾಗೂ ಚಂಡಿಕಾ ಹೋಮ ಜರುಗಿತು.
ಶ್ಯಾಮಲಾ ಅಶೋಕ್ ಶೆಟ್ಟಿ ಬೆಳ್ಳಾಡಿ ಶ್ರೀಯಕ್ಷೇಶ್ವರಿ ಅಮ್ಮನವರಿಗೆ ನೂತನ ಮುಖಮಂಟಪವನ್ನು ಸಮರ್ಪಿಸಿ ಮಾತನಾಡಿ,ಅಮ್ಮನವರ ಎರಡನೇ ವರ್ಷದ ವರ್ಧಂತ್ಯೋತ್ಸವ ಕಾರ್ಯಕ್ರಮ ಹಾಗೂ ಜೋಡು ಮೇಳದ ಯಕ್ಷಗಾನ ಕಾರ್ಯಕ್ರಮ ಬಹಳಷ್ಟು ವ್ಯವಸ್ಥಿತವಾದ ರೀತಿಯಲ್ಲಿ ಅದ್ದೂರಿಯಾಗಿ ನಡೆದಿದೆ ಎಂದು ಹೇಳಿದರು.ಇವೊಂದು ದೇವತಾ ಕಾರ್ಯದಲ್ಲಿ ಭಾಗಿಯಾದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
ದಿನಕರ ಶೆಟ್ಟಿ ಬೆಳ್ಳಾಡಿ ಮಾತನಾಡಿ,ಪೂರ್ವಜರ ಕಾಲದಿಂದಲೂ ಇದ್ದ ದೇವಸ್ಥಾನವನ್ನು ಪ್ರಶ್ನಾ ಚಿಂತನಾ ಕಾರ್ಯದ ಮೂಲಕ ಜೀರ್ಣೋದ್ಧಾರ ಗೊಳಿಸಲಾಗಿದೆ ಎಂದರು.ಭಕ್ತರ ಇಷ್ಟಾರ್ಥಗಳನ್ನು ಸಿದ್ಧಿಸುವ ಶ್ರೀ ದೇವಿಯ ಶಕ್ತಿ ಅಪಾರವಾದದ್ದು ಎಂದು ಹೇಳಿದರು.
ಶರತ್ ಕುಮಾರ್ ಶೆಟ್ಟಿ ಬೆಳ್ಳಾಡಿ ಮತ್ತು ರಮೇಶ ನಾಯರಿ ಬಾರ್ಕೂರು ಅವರು ನೂತನ ಮುಖಮಂಟಪವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಬೆಳ್ಳಾಡಿ ಮಕ್ಕಿಮನೆ ಕುಟುಂಬಸ್ಥರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…