ಏಪ್ರಿಲ್.18 ರಂದು ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ,ಬೈಂದೂರಿನ ಪ್ರತಿ ಬೂತ್ ಗಳ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ
ಬೈಂದೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಎಪ್ರಿಲ್ 18 ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಬೈಂದೂರು ವಿಧಾನ ಸಭಾ ಕ್ಷೇತ್ರದ ಪ್ರತಿ ಬೂತ್ ನಲ್ಲಿರುವ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು.
ಬಿ.ವೈ ರಾಘವೇಂದ್ರ ಅವರಿಗೆ ಶ್ರೇಯಸ್ಸು ದೊರಕಲಿ ಎಂದು ಬಿಜೆಪಿ ಪಕ್ಷದ ಕಾರ್ಯಕರ್ತರು ಸಾಮೂಹಿಕವಾಗಿ ಪ್ರಾರ್ಥನೆಯನ್ನು ನೆರವೇರಿಸಲಿದ್ದಾರೆ.
ಬಿ.ವೈ. ರಾಘವೇಂದ್ರ ಅವರು ಈ ಬಾರಿ ಬೃಹತ್ ಅಂತರದ ಗೆಲುವು ಸಾಧಿಸಬೇಕು ಎಂಬ ಸಂಕಲ್ಪದೊಂದಿಗೆ ಈಗಾಗಲೇ ಬಿಜೆಪಿ ಮುಖಂಡರು, ಪ್ರಮುಖರು,ಕಾರ್ಯಕರ್ತರು ಕ್ಷೇತ್ರಾದ್ಯಂತ ಪ್ರಚಾರ ಪ್ರಕ್ರಿಯೆ ಚುರುಕುಗೊಳಿಸಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದಿಂದಲೇ 1 ಲಕ್ಷಕ್ಕೂ ಅಧಿಕ ಲೀಡ್ ನೀಡಲು ಎಲ್ಲ ಪ್ರಯತ್ನಗಳು ಎಡೆಬಿಡದೆ ಸಾಗುತ್ತಿದೆ.ಬೈಂದೂರು ಕ್ಷೇತ್ರ ಒಂದರಲ್ಲೆ ಒಂದು ಲಕ್ಷ ಮತ ಲೀಡ್ ನೀಡಲು ಎಲ್ಲಾ ರೀತಿಯ ಕಾರ್ಯತಂತ್ರಗಳನ್ನು ಬೈಂದೂರು ಬಿಜೆಪಿ ಕೈಗೊಂಡಿದೆ.
ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆ ಸಮಾರಂಭಕ್ಕೆ ಬೈಂದೂರಿನ ಜನಪ್ರಿಯ ಶಾಸಕರಾದ ಗುರುರಾಜ ಗಂಟಿಹೊಳೆಯವರ ನೇತೃತ್ವದಲ್ಲಿ ಅಪಾರ ಸಂಖ್ಯೆಯಲ್ಲಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಶಿವಮೊಗ್ಗಕ್ಕೆ ತೆರಳಲಿದ್ದಾರೆ.ನಾಮಪತ್ರ ಸಲ್ಲಿಕೆ ಸಮಾರಂಭವನ್ನು ಯಶಸ್ವಿಯಾಗಿಸಲು ಬೈಂದೂರು ಕ್ಷೇತ್ರದಿಂದಲೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ,ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ವರಿಷ್ಠರೂ ಆದ
ಎನ್ ಡಿಎ ಮಿತ್ರಕೂಟದ ಎಚ್. ಡಿ.ಕುಮಾರಸ್ವಾಮಿ,ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ,ಮಾಜಿ ಸಚಿವರಾದ ಎಂಟಿಬಿ ನಾಗರಾಜ,ಬೈರತಿ ಬಸವರಾಜ ಸಹಿತ ಕ್ಷೇತ್ರ ವ್ಯಾಪ್ತಿಯ ಬಿಜೆಪಿ, ಜೆಡಿಎಸ್ ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾ, ಮಂಡಲ ಅಧ್ಯಕ್ಷರು, ಪದಾಧಿಕಾರಿಗಳು ಸಹಿತವಾಗಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ಯರು, ಹಿತೈಷಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಬೈಂದೂರು ಮಂಡಲ ಬಿಜೆಪಿ ಮಾಧ್ಯಮ ವಿಭಾಗ ಪ್ರಕಟನೆ ತಿಳಿಸಿದೆ.
