ಕುಂದಾಪುರ:ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಬÉೈಂದೂರು ತಾಲೂಕು ಸ್ವೀಪ್ ಸಮಿತಿ,ಬÉೈಂದೂರು ತಾಲೂಕು ಆಡಳಿತ ಹಾಗೂ ನಾಡ ಗ್ರಾ.ಪಂ ವತಿಯಿಂದ ನಾಡ ಗ್ರಾ.ಪಂ ವ್ಯಾಪ್ತಿಯ ಕುರು ಕುದ್ರುವಿನಲ್ಲಿರುವ ದ್ವೀಪ ವಾಸಿಗಳಿಗೆ ಅಧಿಕಾರಿಗಳ ತಂಡವು ದೋಣಿ ಮೂಲಕ ತೆರಳಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಗುರುವಾರ ನಡೆಯಿತು.ಬÉೈಂದೂರು ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಎಸ್. ಬಡಕುಂದ್ರಿ ನೇತೃತ್ವ ತಂಡ ಸ್ವೀಪ್ ಸಮಿತಿಯ ತಂಡವು ದೋಣಿಯ ಮೂಲಕ ನದಿ ದಾಟಿ, ಕುರು ಕುದ್ರು ನಿವಾಸಿಗಳ ಮನೆಗಳಿಗೆ ತೆರಳಿ ಮೇ 7 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯ ಮತದಾನ ಮಾಡಬೇಕೆಂದು ಮನವಿ ಮಾಡಿದರು.ಈ ಸಂದರ್ಭ ಸ್ಥಳೀಯರೊಂದಿಗೆ ಸಂವಾದ ನಡೆಸಿದ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಎಸ್. ಬಡಕುಂದ್ರಿ,ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾವೊಬ್ಬ ಮತದಾರನು ಮತದಾನ ಪ್ರಕ್ರಿಯೆಯಿಂದ ಹೊರಗುಳಿಯಬಾರದು.ದೇಶದ ಸರ್ವತೋಮುಖ ಅಭಿವೃದ್ಧಿಗೆ ನಾವೆಲ್ಲರೂ ಮತ ಚಲಾಯಿಸುವುದು ಅಗತ್ಯ.ನಮ್ಮ ಮತದ ಮಹತ್ವ ಅರಿತಾಗ ಮಾತ್ರ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜ್ಞಾವಂತ ಪ್ರಜೆಯಾಗಲು ಸಾಧ್ಯ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಿ ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಅಲ್ಲಿ ಸೇರಿದ್ದ ದ್ವೀಪ ವಾಸಿಗಳಿಗೆ ಮತದಾನ ಮಾಡುವ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.ಬÉೈಂದೂರು ತಾ.ಪಂ. ಸಹಾಯಕ ನಿರ್ದೇಶಕ ಸುರೇಶ್,ನಾಡ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಹರೀಶ್ ಮೊಗವೀರ, ಎನ್‍ಆರ್‍ಎಲ್‍ಎಂ ಸಿಬ್ಬಂದಿ,ಸಂಜೀವಿನಿ ಸಂಘದ ಸದಸ್ಯರು,ರೇ|ಫಾ| ರಾಬರ್ಟ್ ಝಡ್ ಎಂ. ಡಿ’ಸೋಜಾ ಸ್ಮಾರಕ ಐಟಿಐ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು,ಸಿಬಂದಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…