ಕುಂದಾಪುರ

ದೋಣಿ ಮೂಲಕ ತೆರಳಿ ಮತದಾನದ ಜಾಗೃತಿ

Share

ಕುಂದಾಪುರ:ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಬÉೈಂದೂರು ತಾಲೂಕು ಸ್ವೀಪ್ ಸಮಿತಿ,ಬÉೈಂದೂರು ತಾಲೂಕು ಆಡಳಿತ ಹಾಗೂ ನಾಡ ಗ್ರಾ.ಪಂ ವತಿಯಿಂದ ನಾಡ ಗ್ರಾ.ಪಂ ವ್ಯಾಪ್ತಿಯ ಕುರು ಕುದ್ರುವಿನಲ್ಲಿರುವ ದ್ವೀಪ ವಾಸಿಗಳಿಗೆ ಅಧಿಕಾರಿಗಳ ತಂಡವು ದೋಣಿ ಮೂಲಕ ತೆರಳಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಗುರುವಾರ ನಡೆಯಿತು.ಬÉೈಂದೂರು ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಎಸ್. ಬಡಕುಂದ್ರಿ ನೇತೃತ್ವ ತಂಡ ಸ್ವೀಪ್ ಸಮಿತಿಯ ತಂಡವು ದೋಣಿಯ ಮೂಲಕ ನದಿ ದಾಟಿ, ಕುರು ಕುದ್ರು ನಿವಾಸಿಗಳ ಮನೆಗಳಿಗೆ ತೆರಳಿ ಮೇ 7 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯ ಮತದಾನ ಮಾಡಬೇಕೆಂದು ಮನವಿ ಮಾಡಿದರು.ಈ ಸಂದರ್ಭ ಸ್ಥಳೀಯರೊಂದಿಗೆ ಸಂವಾದ ನಡೆಸಿದ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಎಸ್. ಬಡಕುಂದ್ರಿ,ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾವೊಬ್ಬ ಮತದಾರನು ಮತದಾನ ಪ್ರಕ್ರಿಯೆಯಿಂದ ಹೊರಗುಳಿಯಬಾರದು.ದೇಶದ ಸರ್ವತೋಮುಖ ಅಭಿವೃದ್ಧಿಗೆ ನಾವೆಲ್ಲರೂ ಮತ ಚಲಾಯಿಸುವುದು ಅಗತ್ಯ.ನಮ್ಮ ಮತದ ಮಹತ್ವ ಅರಿತಾಗ ಮಾತ್ರ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜ್ಞಾವಂತ ಪ್ರಜೆಯಾಗಲು ಸಾಧ್ಯ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಿ ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಅಲ್ಲಿ ಸೇರಿದ್ದ ದ್ವೀಪ ವಾಸಿಗಳಿಗೆ ಮತದಾನ ಮಾಡುವ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.ಬÉೈಂದೂರು ತಾ.ಪಂ. ಸಹಾಯಕ ನಿರ್ದೇಶಕ ಸುರೇಶ್,ನಾಡ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಹರೀಶ್ ಮೊಗವೀರ, ಎನ್‍ಆರ್‍ಎಲ್‍ಎಂ ಸಿಬ್ಬಂದಿ,ಸಂಜೀವಿನಿ ಸಂಘದ ಸದಸ್ಯರು,ರೇ|ಫಾ| ರಾಬರ್ಟ್ ಝಡ್ ಎಂ. ಡಿ’ಸೋಜಾ ಸ್ಮಾರಕ ಐಟಿಐ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು,ಸಿಬಂದಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago