ಮಂಗಳೂರು:ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ಶನಿವಾರ ಸಂಜೆ ವೇಳೆಗೆ ಸಂಭವಿಸಿದೆ.
ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ನೀರುಪಾಲಾದ ಬಾಲಕ. ಕೆಮ್ಮನ್ ಪಳಿಕೆ ಶಾಲೆಯಲ್ಲಿ ಕಲಿಯುತ್ತಿದ್ದ ಈತ 7 ನೇ ತರಗತಿ ತೇರ್ಗಡೆ ಹೊಂದಿದ್ದ.
ನೆಚ್ಚಬೆಟ್ಟು ತನ್ನ ಮನೆ ಸಮೀಪದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಂದ ಸ್ನೇಹಿತರ ಜೊತೆಗೆ ಪಕ್ಕದ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದು ಆ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ನದಿ ದಡದಿಂದ ಬೊಬ್ಬೆ ಕೇಳಿ ಬಂದ ಹಿನ್ನಲೆಯಲ್ಲಿ ಹತ್ತಿರದಲ್ಲೇ ಕ್ರಿಕೆಟ್ ಆಟವಾಡುತ್ತಿದ್ದ ಯುವಕರು ಸುಹೈಲ್ ನನ್ನು ನದಿಯಿಂದ ಮೇಲಕ್ಕೆತ್ತಿದ್ದು ಅದಾಗಲೇ ಆತ ಮೃತಪಟ್ಟಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.ಮರಣೋತ್ತರ ಪರೀಕ್ಷೆಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…