ಬೈಂದೂರು:ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ (ಶುಭದಾ ಆಂಗ್ಲ ಮಾಧ್ಯಮ ಶಾಲೆ) ಕಿರಿಮಂಜೇಶ್ವರದಲ್ಲಿ
ಏಪ್ರಿಲ್ 15 ರಿಂದ 19ರ ವರೆಗೆ ಐದು ದಿನಗಳ ಕಾಲ ನಡೆದ ಚಿಣ್ಣರ ಬೇಸಿಗೆ ಶಿಬಿರ ‘ಅಪರಂಜಿ’ ಕಾರ್ಯಕ್ರಮದ
ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.
ಅಧ್ಯಕ್ಷತೆಯನ್ನು ವಹಿಸಿದ್ದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಅದರ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಣೇಶ ಮೊಗವೀರ ಅವರು ಮಾತನಾಡಿ ಬೇಸಿಗೆ ಶಿಬಿರದ ಮೂಲಕ ವಿದ್ಯಾರ್ಥಿಗಳಲ್ಲಿ ಬಾಂಧವ್ಯ ವೃದ್ಧಿಯಾಗುತ್ತದೆ,
ವಿದ್ಯಾರ್ಥಿಗಳೇ ಇಂತಹ ನೂರಾರು ವೇದಿಕೆಗಳು ನಿಮಗೆ ಒದಗಿ ಬರಲಿ ಎಂದು ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ 92.7 ಬಿಗ್ F.M ನ ರೇಡಿಯೋ ಜಾಕಿ ಶ್ರೀಮತಿ ಆರ್.ಜೆ.ನಯನಾ ಅವರು ಮಾತನಾಡುತ್ತಾ ವಿದ್ಯಾರ್ಥಿಗಳೇ ಬೇಸಿಗೆ ರಜೆಯನ್ನು ಹಾಡುತ್ತಾ,ಕುಣಿಯುತ,ನಲಿಯುತ ಖುಷಿ ಖುಷಿಯಾಗಿ ಕಳೆಯಿರಿ ಅಪರಂಜಿ ಇದೊಂದು ಅರ್ಥಪೂರ್ಣ ಕಾರ್ಯಕ್ರಮವೆಂದು ಶುಭ ಹಾರೈಸಿದರು.ಅರೆಹೊಳೆ ಪ್ರತಿಷ್ಠಾನ(ರಿ) ಇದರ ಅಧ್ಯಕ್ಷರಾದ ಸದಾಶಿವ ರಾವ್ ಮಾತನಾಡಿ,ವಿದ್ಯಾರ್ಥಿ ಪ್ರತಿಭೆಗಳು ಬೆಳಗಲು ನೂರಾರು ವೇದಿಕೆಗಳಿವೆ ಅವೆಲ್ಲವನ್ನೂ ಸರಿಯಾಗಿ ಉಪಯೋಗಿಸಿಕೊಂಡಾಗ ನೀವು ಪ್ರತಿಭಾವಂತ ವಿದ್ಯಾರ್ಥಿಯಾಗಿ ಹೊರ ಹೊಮ್ಮಲು ಸಾಧ್ಯವೆಂದರು.
ಶಿಬಿರದ ನಿರ್ದೇಶಕರು,ಶಿಕ್ಷಣ ಸಂಯೋಜಕ ಸತ್ಯನಾ ಕೊಡೇರಿ ಅವರು ಮಾತನಾಡುತ್ತಾ,ಬೇಸಿಗೆ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಸುದ್ರಡಗೊಳಿಸಲು ಸಾಧ್ಯವೆಂದರು.
ಸಮಾರಂಭದಲ್ಲಿ ಶಿಬಿರದ ಸಂಪನ್ಮೂಲ ವ್ಯಕ್ತಿಗಳನ್ನು ಹಾಗೂ ಅಂತರಾಷ್ಟ್ರೀಯ ಐಕನ್ ಪ್ರಶಸ್ತಿಗೆ ಆಯ್ಕೆಯಾಗಿರುವ ಧನ್ವಿ ಮರವಂತೆತವರನ್ನು ಅಭಿನಂದಿಸಲಾಯಿತು.
550 ವಿದ್ಯಾರ್ಥಿಗಳು ಶಿಬಿರದ ಸದುಪಯೋಗವನ್ನು ಪಡೆದರು.ಸಮಾರಂಭದಲ್ಲಿ ವಿದ್ಯಾರ್ಥಿಗಳು,ವಿದ್ಯಾಭಿಮಾನಿಗಳು,ವಿದ್ಯಾರ್ಥಿ ಪೋಷಕರು,ಶಾಲಾ ಬೋಧಕ,ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಸ್ವಾಗತಿಸಿ,ಜನತಾ ಕಾಲೇಜಿನ ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ ನಿರೂಪಿಸಿದರು,ಶಿಕ್ಷಕಿ ದಿವ್ಯಾ ಸುವರ್ಣ ವಂದಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…