ಕುಂದಾಪುರ:ತಾಲೂಕಿನ ಪ್ರಸಿದ್ಧ ಶ್ರೀಕ್ಷೇತ್ರ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಿಯ ಬ್ರಹ್ಮ ರಥೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಏಪ್ರಿಲ್ 23 ರಂದು ಮಂಗಳವಾರ ವಿಜೃಂಭಣೆಯಿಂದ ನಡೆಯಲಿದೆ.
ಶ್ರೀದೇವಿಯ ಬ್ರಹ್ಮರಥೋತ್ಸವ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 10 ಕ್ಕೆ ಮಹಿಳೆಯರಿಂದ ಸಾಮೂಹಿಕ ಕುಂಕಮಾರ್ಚನೆ ಹಾಗೂ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಲಿದೆ.ಸಂಜೆ 6 ರಿಂದ ಯಕ್ಷಗುರು ಪ್ರಸಾದ್ ಕುಮಾರ್ ಮೊಗೆಬೆಟ್ಟು ಸಾರಥ್ಯದಲ್ಲಿ ಟೀಮ್ ಮಸ್ತ್ಯಗಂಧ ಇವರಿಂದ ಶ್ರೀರಾಮ ದರ್ಶನಂ ಯಕ್ಷಗಾನ ಕಾರ್ಯಕ್ರಮ ನಡೆಯಲಿದೆ.
ಏಪ್ರಿಲ್ 24 ರಂದು ಕುಣಿತ ಭಜನೆ:ಏಪ್ರಿಲ್ 24 ರ ಬುಧವಾರದಂದು ಸಂಜೆ 6 ರಿಂದ ಕುಣಿತ ಭಜನೆ,ಸಂಜೆ 7 ರಿಂದ ಬಗ್ವಾಡಿ ಫ್ರೆಂಡ್ಸ್ ಪ್ರಾಯೋಜಕತ್ವದಲ್ಲಿ 14ನೇ ವರ್ಷದ ಸಾಂಸ್ಕøತಿಕ ಉತ್ಸವ ಕಲರವ-2024 ಜರುಗಲಿದೆ.ಕರಾವಳಿ ಹೆಸರಾಂತ ನೃತ್ಯ ತಂಡದಿಂದ ನೃತ್ಯ ವೈಭವ,ಸಂಗೀತ ರಸ ಸಂಜೆ ನಡೆಯಲಿದೆ.ಏಪ್ರಿಲ್ 25 ರಂದು ಶ್ರೀದೇವಿಯ ತೆಪ್ಪೋತ್ಸವ ಸೇವೆ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಲಿದೆ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…