ಕುಂದಾಪುರ:ತಾಲೂಕಿನ ಇತಿಹಾಸ ಪ್ರಸಿದ್ಧ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವರ ನೂತನ ಶಿಲಾಮಯಗುಡಿ ಲೋಕಾರ್ಪಣೆ ಹಾಗೂ ಶ್ರೀದೇವರ ಪುನರ್ ಪ್ರತಿಷ್ಠಾ ಮಹೋತ್ಸೊವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ವಿಜೃಂಭಣೆಯಿಂದ ನಡೆಯಿತು.
ಶ್ರೀಲಕ್ಷ್ಮೀನಾರಾಯಣ ದೇವರ ಪುನರ್ ಪ್ರತಿಷ್ಠಾ ಮಹೋತ್ಸವ ಅಂಗವಾಗಿ ಗುರುಗಣೇಶ ಪೂಜೆ,ಪುಣ್ಯಾಹವಾಚನ,ನವಗ್ರಹ ಧಾನ್ಯ ದಾನ,ಫಲದಾನ,ಜೀವಕುಭಾಭಿಷೇಕ,ಮಹಾಪ್ರಣ,ಪ್ರತಿಷ್ಠಾನ್ಯಾಸಾದಿಗಳು,ತತ್ತ್ವಕಲಶ ಸ್ಥಾಪನಾ,ಲಕ್ಷ್ಮೀನಾರಾಯಣ ಹೃದಯ ಹೋಮ,ಮಹಾಪೂಜಾ,ಪ್ರಸಾದ ವಿತರಣೆ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.ಶ್ರೀಲಕ್ಷ್ಮೀನಾರಾಯಣ ದೇವರಿಗೆ ಅಲಂಕಾರ ಪೂಜೆ ಮತ್ತು ಮಹಾಮಂಗಳಾರತಿ ಹಾಗೂ ಶಿಖರ ಪ್ರತಿಷ್ಠೆಯನ್ನು ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮ ಕುಂಭಾಭಿಷೇಕ ಮಹೋತ್ಸವ ಸಮಿತಿ ಅಧ್ಯಕ್ಷ ಕುಶಲ ಶೆಟ್ಟಿ ನಗು ಗ್ರೂಪ್ ಕುಂದಾಪುರ ಮತ್ತು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾಷ್ಠ ಶಿಲ್ಪದಿಂದ ಕಂಗೊಳಿಸುತ್ತಿರುವ ಶ್ರೀಲಕ್ಷ್ಮೀನಾರಾಯಣ ದೇವಾಲಯ:ಹೆಮ್ಮಾಡಿ ಶ್ರೀಲಕ್ಮೀ ನಾರಾಯಣ ದೇವಸ್ಥಾನವು ಇತಿಹಾಸಕಾರರ ಅಧ್ಯಯನದಂತೆ 11ನೇ ಶತಮಾನದಲ್ಲಿ ಹೇಮಂತ ಅರಸನಿಂದ ಸ್ಥಾಪಿಸಲಾಗಿದೆ ಎನ್ನುವ ಐತಿಹ್ಯವಿದೆ.ನೂತನ ಶಿಲಾಮಯಗುಡಿ ನೋಡುಗರ ಮನ ಸೆಳೆತಯುತ್ತಿದ್ದು,ಕಾಷ್ಠ ಶಿಲ್ಪದೊಂದಿಗೆ ಕಂಗೊಳಿಸುತ್ತಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…