ಅಂಪಾರು:ಕುಂದಾಪುರ ತಾಲೂಕಿನ ಅಂಪಾರು ಗ್ರಾಮದ ಶಾನ್ಕಟ್ಟು ಕೆಳಗಿನ ಮನೆ ಕುಟುಂಬಸ್ಥರ ಶ್ರಿ ಆದಿ ನಾಗ ದೇವರ ಸನ್ನಿಧಿಯಲ್ಲಿ ಏಕ ಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಗಣಪತಿ ಪೂಜೆ, ದರ್ಶನ ಸೇವೆ,ಮಹಾ ಅನ್ನಸಂತರ್ಪಣೆ ಜರಗಿತು ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಅನ್ನ ಪ್ರಸಾದವನ್ನು ಸ್ವೀಕರಿಸಿದರು.
ಶ್ರೀ ನಾಗದೇವರ ಏಕ ಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮದ ಅಂಗವಾಗಿ ಹೊರೆ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.ಗ್ರಾಮ ದೇವತೆ,ಅಡಿ ದೇವತೆಗಳಿಗೆ ಫಲ ಸಮರ್ಪಣೆ ಕಾರ್ಯಕ್ರಮ ನಡೆಯಿತು.ಆಶ್ಲೇಷಾ ಬಲಿ,ಮಂಡಲ ಮಂಟಪದಲ್ಲಿ ವಾಸ್ತು ರಾಕ್ಷೋಷ್ನ ಬಲಿ ಜರುಗಿತು.
ಶಾನ್ಕಟ್ಟು ಕೆಳಗಿನ ಮನೆ ರಾಘವೇಂದ್ರ ಶೆಟ್ಟಿ ಮಾತನಾಡಿ, ಕೆಳಗಿನ ಮನೆ ಕುಟುಂಬಸ್ಥರ ವತಿಯಿಂದ ಏಕ ಪವಿತ್ರ ನಾಗಮಂಡಲೋತ್ಸವ ವಿಜೃಂಭಣೆಯಿಂದ ನಡೆದಿದೆ ಎಂದು ಹೇಳಿದರು.ಸಂತಾನ ಕಾರಕನಾದ ಶ್ರೀ ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷಾ ಬಲಿ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆದಿದೆ ಎಂದು ಹೇಳಿದರು.
ದಿವಾಕರ ಶೆಟ್ಟಿ ಮಾತನಾಡಿ,108 ವರ್ಷಗಳ ಹಿಂದೆ ಸಂತಾನ ಪ್ರಾಪ್ತಿಗಾಗಿ ಹೇಳಿಕೊಂಡಿರುವ ನಾಗಮಂಡಲೋತ್ಸವ ಹರಕೆಯನ್ನು ಕುಟುಂಬಸ್ಥರ ಕೂಡುವಿಕೆಯಿಂದ ದೇವರಿಗೆ ಸಮರ್ಪಣೆ ಮಾಡಲಾಗಿದೆ ಎಂದರು.ಶ್ರೀ ನಾಗದೇವರು ಕುಟುಂಬಸ್ಥರಿಗೂ, ಗ್ರಾಮಸ್ಥರಿಗೆ ಒಳಿತನ್ನು ಮಾಡಲಿ ಎಂದು ಪ್ರಾರ್ಥಿಸಿದರು.
ಚಂದ್ರ ಜೋಗಿ ಶಾನ್ಕಟ್ಟು ಮಾತನಾಡಿ,
ನಾಗಮಂಡಲೋತ್ಸವ ಕಾರ್ಯಕ್ರಮದ ಅಂಗವಾಗಿ ಹೊರೆ ಕಾಣಿಕೆ ಗ್ರಾಮಸ್ಥರ ಸಹಕಾರದಿಂದ ವಿಜೃಂಭಣೆಯಿಂದ ನಡೆದಿದೆ.ಮಹಾ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸಿದರು ಎಂದರು.ಇವೊಂದು ದೇವತಾ ಕಾರ್ಯದಲ್ಲಿ ಭಾಗಿಯಾದ ಎಲ್ಲರಿಗೂ ಶಾನ್ಕಟ್ಟು ಕುಟುಂಬಸ್ಥರ ಪರವಾಗಿ ಧನ್ಯವಾದವನ್ನು ಅರ್ಪಿಸಿದರು.
ಈ ಸಂದರ್ಭದಲ್ಲಿ ಶಾನ್ಕಟ್ಟು ಕುಟುಂಬಸ್ಥರು,ಗ್ರಾಮಸ್ಥರು ಉಪಸ್ಥಿತರಿದ್ದರು .
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…