ಬೈಂದೂರು:ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಎಸ್.ಟಿ ಮೋರ್ಚಾದ ಬೃಹತ್ ಸಮಾವೇಶ ಸೋಮವಾರ ಫಾರ್ಮ್ ಹೌಸ್ ಗುಡ್ಡೆಯಂಗಡಿ ತಗ್ಗರ್ಸೆಯಲ್ಲಿ ನಡೆಯಿತು.
ಚಿತ್ರನಟಿ ಹಾಗೂ ಬಿಜೆಪಿ ನಾಯಕಿ ಶೃತಿ ಎಸ್ ಟಿ ಮೋರ್ಚಾದ ಬೃಹತ್ ಸಮಾವೇಶವನ್ನು ಉದ್ಘಾಟಿಸಿ, ಮಾತನಾಡಿ ಅಭಿವೃದ್ಧಿ ಮೂಲಕ ದೇಶದ ನಾನಾ ಪ್ರಗತಿಯನ್ನು ಹೆಚ್ಚಿಸಲು ಹಗಲಿರುಳು ಕೆಲಸ ಮಾಡುತ್ತಿರುವ ನರೇಂದ್ರ ಮೋದಿ ಅವರನ್ನು ಬೆಂಬಲಿಸಿ,ಬಿ.ವೈ ರಾಘವೇಂದ್ರ ಅವರಿಗೆ ಮತ ನೀಡಬೇಕೆಂದು ಕೇಳಿಕೊಂಡರು.
ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ ರಾಘವೇಂದ್ರ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿ,ಕೊಲ್ಲೂರು ಕಾರಿಡಾರ್ ಮೂಲಕ ಬೈಂದೂರು ಕ್ಷೇತ್ರವನ್ನು ಸಮೃದ್ಧ ಬೈಂದೂರನ್ನಾಗಿ ನಿರ್ಮಾಣ ಮಾಡಲು ಎಲ್ಲರೂ ಸಹಕಾರ ನೀಡಬೇಕು.ನಿಮ್ಮ ಅಮೂಲ್ಯವಾದ ಮತವನ್ನು ನನಗೆ ನೀಡಬೇಕು ಎಂದು ವಿನಂತಿಸಿದರು.
ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು.
ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ,ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಬೈಂದೂರು ಚುನಾವಣೆಯ ಪ್ರಭಾರಿ ಅಶೋಕ್ ಮೂರ್ತಿ, ಬಿಜೆಪಿ ಮುಖಂಡ ಕೃಷ್ಣಪ್ರಸಾದ್ ಅಡ್ಯಂತಾಯ,ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್, ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಅನಿತಾ ಆರ್.ಕೆ, ಎಸ್ ಟಿ ಮೋರ್ಚಾ ಅಧ್ಯಕ್ಷ ರಾಮ ನಾಯ್ಕ್ , ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಶಿವರಾಜ್ ಪೂಜಾರಿ ಗೋಳಿಹೊಳೆ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಜೇಂದ್ರ ಬೇಲೆಮನೆ, ಬೈಂದೂರು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ಶ್ಯಾಮಲಾ ಕುಂದರ್, ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿ ಉಮೇಶ್ ಶೆಟ್ಟಿ ಕಲ್ಗೆದ್ದೆ
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರು ಸ್ವಾಗತಿಸಿದರು, ಕಾರ್ಯಕ್ರಮ ನಿರೂಪಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…