ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ನಾವುಂದ ರಾಮ ಮಂದಿರಕ್ಕೆ ಭೇಟಿ


ಬೈಂದೂರು:ತಾಲೂಕಿನ ನಾವುಂದ ಸಪರಿವಾರ ಶ್ರೀ ಪಾದ್ಮಾವತಿ ಅಮ್ಮನವರ ದೇವಸ್ಥಾನ ಹಾಗೂ ನೂತನವಾಗಿ ನಿರ್ಮಿಸಿರುವ ಶ್ರೀ ರಾಮ ಭಜನಾ ಮಂದಿರಕ್ಕೆ ಉಡುಪಿ ಕಾಣಿಯೂರು ಮಠ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಅವರು ಗುರುವಾರ ಭೇಟಿ ನೀಡಿ ಶ್ರೀರಾಮ ಭಜನೆ ದೀಪ ಸ್ಥಾಪನೆ ಮಾಡಿದರು.
ಪೂರ್ಣ ಕುಂಭ ಸ್ವಾಗತದೊಂದಿಗೆ ಸ್ವಾಮೀಜಿ ಅವರನ್ನು ಅದ್ದೂರಿ ಮೆರವಣಿಯೊಂದಿಗೆ ಬರಮಾಡಿಕೊಳ್ಳಲಾಯಿತು.
ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಿತು.
ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಿ ಮಾತನಾಡಿ,
ದೇವರು ನಮಗೆ ರಕ್ಷಕನಾಗಿ ಇದ್ದಾನೆ ಎನ್ನುವ ವಿಶ್ವಾಸ ನಮ್ಮಲ್ಲಿ ಬರಬೇಕು.
ದೇವರ ಸ್ಮರಣೆಯಿಂದ ಜೀವನದಲ್ಲಿ ಕಷ್ಟ ಮತ್ತು ಸುಖವನ್ನು ಸಮಾನವಾಗಿ ಅನುಭವಿಸಲು ಸಾಧ್ಯವಿದೆ ಎಂದು ಹೇಳಿದರು.ರಾಮ ದೇವರ ಅನುಗ್ರಹದಿಂದಲೇ ಈ ರಾಮ ಮಂದಿರ ಪೂರ್ಣಗೊಂಡಿದೆ ಎಂದು ಹೇಳಿದರು.
ಭಕ್ತರಿಗೆ ಮಂತ್ರಾಕ್ಷತೆಯನ್ನು ಸ್ವಾಮೀಜಿಗಳು ನೀಡಿ ಹರಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು .





















































































































































































































































































































































































































































































































































































































































































































































































































































































































































































































































































































































































































































































































































































































































































