ಏಪ್ರಿಲ್.27 ರಂದು ಕಿರಿಮಂಜೇಶ್ವರದಲ್ಲಿ ಯುವ ಸಮಾವೇಶ,ತೇಜಸ್ವಿ ಸೂರ್ಯ ಭಾಗಿ

ಕುಂದಾಪುರ:ಬೈಂದೂರು ಮಂಡಲ ಯುವಮೋರ್ಚಾ ಸಮಾವೇಶ ಏಪ್ರಿಲ್ 27 ರಂದು ಮಧ್ಯಾಹ್ನ 2 ಗಂಟೆಗೆ ಕಿರಿಮಂಜೇಶ್ವರದಲ್ಲಿ ನಡೆಯಲಿದೆ.
ಬಿಜೆಪಿ ಪಕ್ಷದ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಯುವ ಸಮಾವೇಶವನ್ನು ಉದ್ಘಾಟಿಸಿ,ದಿಕ್ಸೂಚಿ ಭಾಷಣ ಮಾಡಲಿದ್ದು,ಚುನಾವಣೆಯಲ್ಲಿ ಯುವ ಮೋರ್ಚಾದ ಕಾರ್ಯ,ಯುವ ಜನತೆಯ ಉತ್ಸಾಹ,ದೇಶದಲ್ಲಿ ಕಳೆದ 10 ವರ್ಷದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯದ ಬಗ್ಗೆ ವಿವರಿಸಲಿದ್ದಾರೆ.
ಯುವ ಮೋರ್ಚಾ ಸಮಾರೋಪ ಮುಗಿದ ನಂತರ ಅದೇ ವೇದಿಕೆಯಲ್ಲಿ ಶಾಸಕರಾದ ಗುರುರಾಜ ಗಂಟಿಹೊಳೆಯವರು ರೂಪಿಸಿ, ಅನುಷ್ಠಾನಗೊಳಿಸಿದ ಯಶಸ್ವಿ ಕಾರ್ಯಕ್ರಮವಾದ ಬೂತ್ ಕಡೆಗೆ ಸಮೃದ್ಧ ನಡೆಗೆ ಸಮಾರೋಪ ಕಾರ್ಯಕ್ರಮ ನಡೆಯಲಿದೆ.ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಅವರು ಭಾಗವಹಿಸಿ ಪ್ರಮುಖ ಭಾಷಣ ಮಾಡಲಿದ್ದಾರೆ.ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಬೂತ್ ಕಡೆಗೆ ಸಮೃದ್ಧ ನಡೆಗೆ ಯ ಅನುಭವವನ್ನು ಹಂಚಿಕೊಳ್ಳಲಿದ್ದಾರೆ.ಜಿಲ್ಲಾ ಹಾಗೂ ಮಂಡಲ ಬಿಜೆಪಿ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.ಯುವ ಮೋರ್ಚಾ ಸಭೆಯಲ್ಲಿ ಪಕ್ಷದ ಕಾರ್ಯಕರ್ತರು ಸಾಮೂಹಿಕವಾಗಿ ಭಾಗವಹಿಸಬೇಕೆಂದು ಬಿಜೆಪಿ ಬೈಂದೂರು ಮಂಡಲ ಪ್ರಕಟಣೆಯಲ್ಲಿ ತಿಳಿಸಿದೆ.