ಬೈಂದೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರನ್ನು ದಾಖಲೆಯ ಮತಗಳ ಅಂತರದಲ್ಲಿ ಗೆಲ್ಲಿಸಲು ಬೈಂದೂರಿನಿಂದಲೇ ಒಂದು ಲಕ್ಷಕ್ಕೂ ಅಧಿಕ ಲೀಡ್ ಕೊಡಿಸುವಲ್ಲಿ ಪೇಜ್ ಪ್ರಮುಖರ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಉಡುಪಿ ಮಾಜಿ ಶಾಸಕರಾದ ಕೆ.ರಘುಪತಿ ಭಟ್ ಹೇಳಿದರು.
ಶಿರೂರು ಮಾತ್ರಶ್ರೀ ಸಭಾಭವನದಲ್ಲಿ ಶನಿವಾರ ನಡೆದ ಉಪ್ಪುಂದ ಮಹಾಶಕ್ತಿ ಕೇಂದ್ರದ ಪೇಜ್ ಪ್ರಮುಖ್ ಸಭೆಯಲ್ಲಿ ಅವರು ಮಾತನಾಡಿದರು.
ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಕೈಗೊಂಡಿರುವ ಬೂತ್ ಕಡೆಗೆ ಸಮೃದ್ಧ ನಡಿಗೆ ಮೂಲಕ ಈಗಾಗಲೇ ಎಲ್ಲ ಬೂತ್ ಗಳನ್ನು ಸುತ್ತಿ, ಅಲ್ಲಿನ ಕಾರ್ಯಕರ್ತರು, ಪ್ರಮುಖರು ಹಾಗೂ ಮತದಾರರೊಂದಿಗೆ ಸಭೆ ನಡೆಸಿದ್ದಾರೆ.ಸಂಘಟನಾತ್ಮಕವಾಗಿ ಇದೊಂದು ಮಾದರಿ ಕಾರ್ಯ ಎಂದು ಬಣ್ಣಿಸಿದರು.ಬೂತ್ ಗೆದ್ದರೆ ಕ್ಷೇತ್ರ ಗೆಲ್ಲಬಹುದು. ಬೂತ್ ಕಾರ್ಯ ಅತಿ ಮುಖ್ಯವಾಗಿದ್ದು,ಅದರಲ್ಲಿ ಪೇಜ್ ಪ್ರಮುಖರ ಕಾರ್ಯನಿರ್ವಹಣೆ ನಿರ್ಣಾಯಕವಾಗಿರುತ್ತದೆ. ಬಿಜೆಪಿ ಪರ ಮತದಾರರು ಶೇ.100ರಷ್ಟು ಮತದಾನ ಮಾಡುವಂತೆ ನೋಡಬೇಕು. ಮತ ಪ್ರಮಾಣ ಜಾಸ್ತಿ ಮಾಡುವ ಜತೆಗೆ ಬಿಜೆಪಿ ಅಭ್ಯರ್ಥಿಗೆ ಹೆಚ್ಚಿನ ಮತ ನೀಡುವಂತೆ ಮಾಡಬೇಕು ಎಂದು ಕರೆ ನೀಡಿದರು.
ಬಿಜೆಪಿ ಮುಖಂಡರಾದ ಯತೀಶ್ ಅವರು ಮಾತನಾಡಿ,ಪೇಜ್ ಪ್ರಮುಖರು ಯಾವ ರೀತಿ ಕಾರ್ಯ ನಿರ್ವಹಿಸಬೇಕು ಎಂದು ಮಾರ್ಗದರ್ಶನ ಮಾಡಿದರು.
ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ,ಬೈಂದೂರು ಮಂಡಲ ಮೀನುಗಾರಿಕ ಪ್ರಕೋಷ್ಠ ಸಂಚಾಲಕರಾದ ಕುಮಾರ್ ಬಿ.ಎಚ್.ಕೆ.,ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜಗನ್ನಾಾಥ ಮೊಗವೀರ ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು ಉಪಸಿತರಿದ್ದರು.
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…