ಕುಂದಾಪುರ:ಶ್ರೀ ವರಲಕ್ಷ್ಮಿ ಚಾರಿಟೇಬಲ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಪ್ಪುಂದ ಅದರ ನೂತನ ತ್ರಾಸಿ ಶಾಖೆ ಉದ್ಘಾಟನಾ ಕಾರ್ಯಕ್ರಮ ಲೂವಿಸ್ ಕಾಂಪ್ಲೇಕ್ಸ್ ತ್ರಾಸಿಯಲ್ಲಿ ಬುಧವಾರ ನಡೆಯಿತು.
ನೂತನವಾಗಿ ಆರಂಭಗೊಂಡಿರುವ ತ್ರಾಸಿ ಶಾಖೆಯನ್ನು ಯೋಗಿ ರಾಜ ನಾರಾಯಣ ವಿಠಲಾನಂದ ಸ್ವಾಮೀಜಿ ಉದ್ಘಾಟಿಸಿ ಮಾತನಾಡಿ,ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಕೆಲಸವನ್ನು ಮಾಡುತ್ತಿರುವ ಗೋವಿಂದ ಬಾಬು ಪೂಜಾರಿ ಅವರ ಕೊಡುಗೆ ಅಪಾರವಾದದ್ದು.ಅಶಕ್ತರ ಬಾಳಿಗೆ ನೆರವು ನೀಡುವುದರ ಮೂಲಕವೂ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಶ್ರೀ ವರಲಕ್ಷ್ಮಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ,ಸಂಘದ ಸದಸ್ಯರಿಗೆ ಅನುಕೂಲವಾಗುವ ದೃಷ್ಟಿಯಿಂದ ಆರೋಗ್ಯ ಯೋಜನೆಯನ್ನು ಜಾರಿಗೆ ತರಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಸಂಘದ ಅಭಿವೃದ್ಧಿಗೆ ಸದಸ್ಯರ ಕೊಡುಗೆ ಅಪಾರವಾದದ್ದು ಎಂದರು.
ಜನರಿಗೆ ತ್ವರಿತವಾಗಿ ಹಾಗೂ ಉತ್ತಮವಾದ ಸೇವೆ ನೀಡಬೇಕು ಎನ್ನುವ ದೃಷ್ಟಿಯಿಂದ ತ್ರಾಸಿಯಲ್ಲಿ ನೂತನ ಶಾಖೆಯನ್ನು ಆರಂಭಿಸಲಾಗಿದ್ದು.ಗ್ರಾಮೀಣ ಪ್ರದೇಶದಲ್ಲಿ ಇನ್ನಷ್ಟು ಶಾಖೆಯನ್ನು ತೆರೆಯಲು ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಎಸ್.ರಾಜು ಪೂಜಾರಿ ಅವರು ಮಾತನಾಡಿ ಶುಭಹಾರೈಸಿದರು.ಎಸ್.ಕೆ ಮಂಜುನಾಥ,ಜಿಲ್ಲಾ ಸೌಹಾರ್ಧ ಒಕ್ಕೂಟದ ಅಧ್ಯಕ್ಷ ಜಗನ್ನಾಥ ಶೆಟ್ಟಿ,ಮಾಲತಿ ಗೋವಿಂದ ಪೂಜಾರಿ,ಸಂಸ್ಥೆಯ ನಿರ್ದೇಶಕರಾದ ಜಯರಾಮ ಶೆಟ್ಟಿ ಬಿಜೂರು,ಮಾಲತಿ ಪೂಜಾರಿ,ದೇವನ್ ಕೆ.ಪೂಜಾರಿ,ಗಿರೀಶ ಹೊಳ್ಳ, ರಾಘವೇಂದ್ರ ಪೂಜಾರಿ ನಾರಂಬಳ್ಳಿ,ಪಾರ್ವತಿ ಪೂಜಾರಿ,ಮಾಚಯ್ಯ ಬಿಲ್ಲವ ಉಪಸ್ಥಿತರಿದ್ದರು.
ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ ಆರ್.ಪೂಜಾರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು.
ಸಂಸ್ಥೆಯ ಸಿಬ್ಬಂದಿ ನಾಗರಾಜ ಪಿ.ಯಡ್ತರೆ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…