ಬೈಂದೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಚುನಾವಣ ಪ್ರಚಾರ ಕಾರ್ಯ ಶರವೇಗದಲ್ಲಿ ಸಾಗುತ್ತಿದ್ದು ಮೇ 3 ರಂದು ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಬೃಹತ್ ರೋಡ್ ಶೋ ಆಯೋಜಿಸಲಾಗಿದೆ.
ಮೇ 3ರ ಬೆಳಗ್ಗೆ 9.30ಕ್ಕೆ ಕೊಲ್ಲೂರಿನಲ್ಲಿ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ರೋಡ್ ಶೋ ಗೆ ಚಾಲನೆ ನೀಡಲಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ,ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಭಾಗವಹಿಸಲಿದ್ದಾರೆ.
ಕೊಲ್ಲೂರಿಂದ ರೋಡ್ ಶೋ ಆರಂಭವಾಗಿ ವಂಡ್ಸೆ, ನೇರಳಕಟ್ಟೆ,ತಲ್ಲೂರು ವರೆಗೂ ತಲುಪಲಿದೆ.ಮಧ್ಯಾಹ್ನ ಬೈಂದೂರು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ರೋಡ್ ಶೋ ಹಾಗೂ ಬೈಕ್ ರ‍್ಯಾಲಿ ನಡೆಯಲಿದೆ.ನಂತರ ಉಪ್ಪುಂದ ತಾರಪತಿಯಿಂದ ರೋಡ್ ಶೋ ಆರಂಭಗೊಂಡು ಕರ್ಕಿಕಾಳಿವರೆಗೂ ಸಂಚರಿಸಲಿದೆ.ಆ ಮೇಲೆ ಕಿರಿಮಂಜೇಶ್ವರ ಗ್ರಾಮ ಪಂಚಾಯತಿ ವ್ಯಾಪ್ತಿ, ನಾವುಂದ,ಮರವಂತೆ,ತ್ರಾಸಿ, ಗುಜ್ಜಾಡಿ ಮಾರ್ಗವಾಗಿ ಗಂಗೊಳ್ಳಿಯಲ್ಲಿ ಬೃಹತ್ ರೋಡ್ ಶೊ ಅಂತ್ಯವಾಗಲಿದೆ.
ರೋಡ್ ಶೋ ಹಾಗೂ ಬೈಕ್ ರ‍್ಯಾಲಿ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು, ಮುಖಂಡರು ಭಾಗವಹಿಸಲಿದ್ದಾರೆ.
ಬೈಂದೂರು ವಿಧಾನಸಭಾ ಕ್ಷೇತ್ರದಾದ್ಯಂತ ಅಣ್ಣಾಮಲೈ ಅವರು ರೋಡ್ ಶೋ ನಡೆಸಿ ಹೊಸ ಸಂಚಲನ ಮೂಡಿಸಲಿದ್ದಾರೆ.ಅಣ್ಣಾಮಲೈ ಅವರು ಅಣ್ಣಾಮಲೈ ಅವರು ಉಡುಪಿ ಜಿಲ್ಲೆಯಲ್ಲಿ ಖಡಕ್ ಪೊಲೀಸ್ ಅಧಿಕಾರಿಯಾಗಿ ಹೆಸರು ಗಳಿಸಿದ್ದರು.ರೋಡ್ ಶೋ ನಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರಿಗೆ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡಲು ಈಗಾಗಲೇ ಸಂಕಲ್ಪಿಸಲಾಗಿದ್ದು, ಅದರಂತೆ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಚಟುವಟಿಕೆಗಳು ನಡೆಯುತ್ತಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…