ಬೈಂದೂರು:ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ತ್ರಾಸಿ,ಗಂಗೊಳ್ಳಿ ಪರಿಸರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರ ಪ್ರಚಾರ ನಡೆಸಿದರು.
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದಲೇ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡುವ ಸಂಕಲ್ಪವನ್ನು ಈಗಾಗಲೇ ಶಾಸಕರಾದ ಗುರುರಾಜ ಗಂಟಿಹೊಳೆಯವರು ಮಾಡಿದ್ದಾರೆ.ಅದನ್ನು ಈಡೇರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಈ ಚುನಾವಣೆ ಯಜ್ಞದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಕಳೆದ ಹತ್ತು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯ ಮತ್ತು ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಬಿ.ವೈ. ರಾಘವೇಂದ್ರ ಅವರು ಬೈಂದೂರು ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳನ್ನು ಪ್ರತಿ ಮನೆಗೂ ತಲುಪಿಸಬೇಕು. ಮನೆ ಮನೆ ಪ್ರಚಾರದ ಸಂದರ್ಭದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಬಿಜೆಪಿ ಸಾಧನೆಯನ್ನು ಮತದಾರರಿಗೆ ಮನವರಿಕೆ ಮಾಡಬೇಕು. ಎಷ್ಟು ಸಾಧ್ಯವೋ ಅಷ್ಟು ಪ್ರಚಾರ ಪ್ರಕ್ರಿಯೆಯಲ್ಲಿ ಎಲ್ಲರೂ ಸಕ್ರಿಯರಾಗಬೇಕು ಎಂದು ಕರೆ ನೀಡಿದರು.
ಶಾಸಕರಾದ ಗುರುರಾಜ್ ಗಂಟಿಹೊಳೆಯವರು.
ಬೂತ್ ಕಡೆಗೆ ಸಮೃದ್ಧ ನಡಿಗೆ* ಯನ್ನು ಈಗಾಗಲೇ ಯಶಸ್ವಿಯಾಗಿ ಪೂರೈಸಿದ್ದಾರೆ. ನಾವೆಲ್ಲರೂ ಈಗ ಇರುವ ಕನಿಷ್ಠ ಸಮಯದಲ್ಲಿ ಪ್ರತಿ ಬೂತ್ ನ ಎಲ್ಲಾ ಮನೆಗಳಿಗೂ ಸಂಚರಿಸಿ ಬಿಜೆಪಿ ಅಭ್ಯರ್ಥಿಗೆ ಒಂದು ಲಕ್ಷಕ್ಕೂ ಅಧಿಕ ಲೀಡ್ ಇಲ್ಲಿಂದಲೇ ಬರುವಂತೆ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಮನವರಿಕೆ ಮಾಡಿದರು.
ಗಂಗೊಳ್ಳಿಯಲ್ಲಿ ನಾಲ್ಕು ಶಕ್ತಿಕೇಂದ್ರದ 11 ಬೂತ್ ಗೆ ಸಂಬಂಧಿಸಿದಂತೆ ಹಾಗೂ ತ್ರಾಸಿಯ ಗುಜ್ಜಾಡಿಯಲ್ಲಿ ಹೆಮ್ಮಾಡಿ, ಹೊಸಾಡು, ಸೇನಾಪುರ ಶಕ್ತಿಕೇಂದ್ರ ವ್ಯಾಪ್ತಿಯ ಸಭೆ ನಡೆಸಿದರು.
ಪ್ರಮುಖರಾದ ರಾಜೇಶ್ ಕಾವೇರಿ, ಸದಾನಂದ ಉಪ್ಪಿನಕುದ್ರು, ವಿನೋದ್ ಗುಜ್ಜಾಡಿ, ರವಿ ಖಾರ್ವಿ, ಸದಾನಂದ ಶೆಣೈ, ಶಕ್ತಿಕೇಂದ್ರ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…