ಶ್ರೀಧರ್ಮಸ್ಥಳ ಮೇಳದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ನಿಧನ

ಕುಂದಾಪುರ:ಶ್ರೀಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ 42 ವರ್ಷಗಳ ಕಾಲ ತಿರುಗಾಟ ನಿರ್ವಹಿಸಿದ ಹಿರಿಯ ಸವ್ಯಸಾಚಿ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು (64) ನಿಧನಾಗಿದ್ದಾರೆ.ಮೇ 1 ರಂದು ಕೋಟ ಗಾಂಧಿ ಮೈದಾನದಲ್ಲಿ ನಡೆದ ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಕುಕ್ಕಿತ್ತಾಯನ ವೇಷ ನಿರ್ವಹಿಸಿ, ಚೌಕಿಗೆ ಮರಳಿ ಕಿರೀಟ ಆಭರಣಗಳನ್ನು ತೆಗೆದಿಟ್ಟು ಮುಖದ ಬಣ್ಣ ತೆಗೆಯುತ್ತಿದ್ದ ಹಾಗೆ ತೀವ್ರ ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ.ಯಾವುದೇ ಪಾತ್ರ ನೀಡಿದರೂ ಸಮರ್ಥ ರೀತಿಯಲ್ಲಿ ನಿರ್ವಹಿಸುತ್ತಿದ್ದ ಹಿರಿಯ ಸವ್ಯಸಾಚಿ ಕಲಾವಿದರು.