ಮಂಗಳೂರು:ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಶುಕ್ರವಾರ ನಡೆದಿದೆ.
ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (38) ಮೃತಪಟ್ಟ ದುರ್ದೈವಿ. ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ,ಗುಡುಗು ಆರಂಭಗೊಂಡಿದ್ದು ಈ ವೇಳೆ ಮನೆಯಂಗಳದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುವ ವೇಳೆ ಸಿಡಿಲು ಬಡಿದಿದೆ,ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತರಾಗಿದ್ದಾರೆ.ಸೋಮ ಸುಂದರ್ ಅವರು ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದು,10 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.ಮೃತರು ತಾಯಿ, ತಂಗಿ,ಪತ್ನಿಯನ್ನು ಅಗಲಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…