ಕುಂದಾಪುರ:ಕರಾವಳಿ ಮಿತ್ರ ಮಂಡಳಿ ಮರವಂತೆ ಅದರ 25ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ನಾವುಂದ ವ್ಯಾಪ್ತಿಯ ಮಾಟುಬಲೆ ದೋಣಿ ಮೀನುಗಾರರ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ಮರವಂತೆಯಲ್ಲಿ ಶನಿವಾರ ನಡೆಯಿತು.
ಶ್ರೀರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಮರವಂತೆ ಅಧ್ಯಕ್ಷ ವಾಸುದೇವ ಖಾರ್ವಿ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಮೀನುಗಾರಿಕೆ ಜತೆಗೆ ಇನ್ನಿತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದದ ಮನಸು ಚೇತನ್ಯ ಭರಿತವಾಗಿರುತ್ತದೆ.ಮೀನುಗಾರಿಕೆಯಲ್ಲಿ ಜೀವನವನ್ನು ಕಂಡುಕೊಂಡಿರುವ ಮೀನುಗಾರರ ಮಕ್ಕಳು ಶಿಕ್ಷಣವಂತರಾಗಿ ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಪಡೆಯುವಲ್ಲಿ ಪ್ರಯತ್ನಿಸಬೇಕು ಎಂದು ಹೇಳಿದರು.
ಸುರೇಶ ಖಾರ್ವಿ ಅಧ್ಯಕ್ಷತೆ ವಹಿಸಿ ಮಾತನಾಡಿ,ಯಾವುದೆ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಬೇಕಾದರೆ ಪ್ರೋತ್ಸಾಹ ಅತಿ ಮುಖ್ಯವಾಗಿರುತ್ತದೆ ಎಂದರು.ಕರಾವಳಿ ಮಿತ್ರ ಮಂಡಳಿ ಮರವಂತೆ ಉಪಾಧ್ಯಕ್ಷ ಬನರಾಜ್ ಖಾರ್ವಿ,ಕಾರ್ಯದರ್ಶಿ ರಮೇಶ ಖಾರ್ವಿ ಮತ್ತು ಮಾಜಿ ಅಧ್ಯಕ್ಷ ಶ್ರೀಧರ ಖಾರ್ವಿ ಹಾಗೂ ಮಾಜಿ ಉಪಾಧ್ಯಕ್ಷ ಶೇಖರ ಖಾರ್ವಿ ಉಪಸ್ಥಿತರಿದ್ದರು.ರಾಜ್ಯ ಮಟ್ಟದ ಕ್ರಿಕೆಟಿಗರಾದ ನಾಗೇಶ ಖಾರ್ವಿ ಮತ್ತು ಸೂರಜ್ ಖಾರ್ವಿ ಅವರನ್ನು ಸನ್ಮಾನಿಸಲಾಯಿತು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…