ಕುಂದಾಪುರ:ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪ್ಯಾಶನ್ ಡಿಸೈನ್ ಮೇಕಪ್ ಹೇರ್ ಸ್ಟೈಲ್ ಕಾರ್ಯಾಗಾರ ನಡೆಯಿತು.
ಕುಮಾರಿ ಆಶಿಕಾ ಫೌಂಡರ್ ಶಿಯಾ ಮೇಕ್ ಓವರ್ ಬೆಂಗಳೂರು ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸೌಂದರ್ಯ ಪ್ರಜ್ಞೆ ಹಾಗೂ ಮೇಕಪ್ ನ ವಿವಿಧ ಶೈಲಿಯ ಕುರಿತಾಗಿ ಮಾಹಿತಿ ಪ್ರದರ್ಶನ ನೀಡಿದರು.
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಸಂಸ್ಥಾಪಕ ಅಧ್ಯಕ್ಷ ಸುಬ್ರಹ್ಮಣ್ಯ,ನಿರ್ದೇಶಕಿಯಾದ ಮಮತಾ ಹಾಗೂ ಕಾಲೇಜಿನ ಉಪ ಪ್ರಾಂಶುಪಾಲರಾದ ಸುಜಾತ,ಫ್ಯಾಶನ್ ಡಿಸೈನ್ ವಿಭಾಗದ ಮುಖ್ಯಸ್ಥೆ ಮಧುವಿತಾ ಭಟ್ಟಾಚಾರ್ಯ, ಉಪನ್ಯಾಸಕಿ ಲಕ್ಷ್ಮೀ ಹಾಗೂ ಕುಮಾರಿ ಮಾನಸ ಮತ್ತು ಸಂಸ್ಥೆಯ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು, ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಪಂಚಮಿ ನಿರೂಪಿಸಿದರು,ವಿದ್ಯಾರ್ಥಿನಿ ಗಾಯತ್ರಿ ವಂದಿಸಿದರು.
ಫ್ಯಾಶನ್ ಉದ್ಯಮವು ಜನಪ್ರಿಯತೆಯನ್ನು ಗಳಿಸಿದೆ ಫ್ಯಾಶನ್ ವಿನ್ಯಾಸದಲ್ಲಿ ವೃತ್ತಿ ಜೀವನದಲ್ಲಿ ಉತ್ತಮವಾದಂತಹ ಆಯ್ಕೆಯಾಗಿರುತ್ತದೆ ಇಂತಹ ಉತ್ತಮ ದೃಷ್ಟಿಕೋನ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಫ್ಯಾಶನ್ ಡಿಸೈನ್ ವಿಭಾಗದ ವತಿಯಿಂದ” ಮೇಕಪ್ ಅಂಡ್ ಹೇರ್ ಸ್ಟೈಲ್” ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…