ಕುಂದಾಪುರ

ರಾಜ್ಯಕ್ಕೆ 5ನೆ ರ್ಯಾಂಕ್ ಪಡೆದ ಪ್ರತ್ವಿತಾ ಪಿ ಶೆಟ್ಟಿ ಐ.ಎ.ಎಸ್ ಅಧಿಕಾರಿಯಾಗುವ ಆಸೆ

Share

ಕುಂದಾಪುರ:ಎಕ್ಸಲೆಂಟ್ ಮತ್ತು ಲಿಟ್ಲ್‍ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರತ್ವಿತಾ ಪಿ ಶೆಟ್ಟಿ ಎಸ್.ಎಸ್.ಎಲ್.ಸಿ -2024 ಪರೀಕ್ಷೆಯಲ್ಲಿ 625ಕ್ಕೆ 621 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ 5 ನೇ ರ್ಯಾಂಕ್ ಮತ್ತು ಕುಂದಾಪುರ ತಾಲೂಕಿಗೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ.
ಸಂಸ್ಥೆಯ ವತಿಯಿಂದ ವಿದ್ಯಾರ್ಥಿನಿಯನ್ನು ಸನ್ಮಾನಿಸಲಾಯಿತು ಮತ್ತು ಸಂಸ್ಥೆಯ ವತಿಯಿಂದ 10 ಸಾವಿರ ನಗದು ಬಹುಮಾನ ನೀಡುವುದರ ಮೂಲಕ ವಿದ್ಯಾರ್ಥಿಯನ್ನು ಗೌರವಿಸಲಾಯಿತು.
ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ,ವಿದ್ಯಾರ್ಥಿನಿ ಪ್ರತ್ವಿತಾ ಪಿ ಶೆಟ್ಟಿ ಮುಂದೆ ಯು.ಪಿ.ಎಸ್.ಸಿ ಪರೀಕ್ಷೆ ಬರೆದು ಐ.ಎ.ಏಸ್ ಅಧಿಕಾರಿಯಾಗುವ ಆಸೆಯಿದೆ, ನಮ್ಮ ಶಾಲೆಯ ಶಿಕ್ಷಕರು ಸಂಜೆ 6 ರ ತನಕ ನಮ್ಮ ಜೊತೆ ನಿಂತು ನಿರಂತರ ತರಬೇತಿ ನೀಡಿರುವುದು ಈ ಅಂಕ ಗಳಿಸಲು ಸಹಕಾರಿಯಾಯಿತು, ಮತ್ತು ನನ್ನ ಸಾಧನೆಗೆ ಬೆನ್ನೆಲುಬಾಗಿ ನಿಂತಿರುವ ಶಾಲೆಯ ಆಡಳಿತ ಮಂಡಳಿ, ಭೋದಕ,ಭೋದಕೇತರ ಸಿಬ್ಬಂಧಿ ವರ್ಗ ಮತ್ತು ಪೋಷಕರಿಗೆ ಚಿರರುಣಿಯಾಗಿದ್ದೇನೆ ಎಂದರು.
ಎಮ್.ಎಮ್.ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷರಾದ ಎಮ್. ಮಹೇಶ ಹೆಗ್ಡೆ ಶುಭಹಾರೈಸಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್‍ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‍ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ ಅವರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

3 days ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 weeks ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

4 weeks ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

1 month ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

1 month ago

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ:ವಿನಿಶ್ ಕುಮಾರ್,ಅನ್ವಿಶ್ ಕುಮಾರ್ ಗೆ ಪ್ರಥಮ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…

1 month ago