ಶವ ಸಂರಕ್ಷಕ ನೂತನ ಫ್ರೀಜರ್ ಕೊಡುಗೆ

ಕುಂದಾಪುರ:ಗಂಗೊಳ್ಳಿ ಹಸಿಮೀನು ವ್ಯಾಪಾರಸ್ಥರ ಸಂಘದ ವತಿಯಿಂದ ಗಂಗೊಳ್ಳಿ ಶ್ರೀ ವೀರೇಶ್ವರ ಸೇವಾ ಟ್ರಸ್ಟ್‍ಗೆ ಶವ ಸಂರಕ್ಷಕ ನೂತನ ಫ್ರೀಜರ್‍ನ್ನು ಕೊಡುಗೆಯಾಗಿ ಶುಕ್ರವಾರ ನೀಡಲಾಯಿತು.ಶ್ರೀ ವಿರೇಶ್ವರ ದೇವಸ್ಥಾನದ ಅರ್ಚಕ ರವೀಶ್ ಭಟ್ ಅವರು ಧಾರ್ಮಿಕ ಪೂಜಾ ಕಾರ್ಯಗಳನ್ನು ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಹಿಂಜಾವೇ ಮುಖಂಡ ವಾಸುದೇವ ಗಂಗೊಳ್ಳಿ,ಯಶವಂತ ಗಂಗೊಳ್ಳಿ,ನವೀನ್ ಗಂಗೊಳ್ಳಿ,ಟ್ರಸ್ಟ್ ಅಧ್ಯಕ್ಷ ಅಕ್ಷಯ್ ಹಾಗೂ ಕಾರ್ತಿಕ್,ಪ್ರೀತೇಶ್,ಮೋಹನ್,ಮಹೇಶ್ ದಾಕಹಿತ್ಲು ಉಪಸ್ಥಿತರಿದ್ದರು.
ಶ್ರೀ ವೀರೇಸ್ವರ ಸೇವಾ ಟ್ರಸ್ಟ್ ಗಂಗೊಳ್ಳಿ ನಿರ್ವಹಣೆ ಮಾಡಲಿದೆ.ಗಂಗೊಳ್ಳಿ ಹಸಿಮೀನು ವ್ಯಾಪಾರಸ್ಥರ ಸಂಘದ ಸಾಮಾಜಿಕ ನಡೆ ಜನರ ಮೆಚ್ಚುಗೆಗೆ ಪಾತ್ರವಾಗಿದೆ.