ಕುಂದಾಪುರ:ಮನೆಯ ಗೇಟ್ ಮುಂದೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಎಂಬಲ್ಲಿ ಭಾನುವಾರ ನಡೆದಿದೆ. ಹಡವಿನಕೋಣೆ ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ ಇರ್ಷಾದ್ (52) ಮೃತಪಟ್ಟಿದ್ದಾರೆ.
ಶನಿವಾರ ತಡರಾತ್ರಿ ಸುರಿದ ಬಾರಿ ಗಾಳಿ ಮಳೆಗೆ ಹಡವಿನಕೋಣೆಯಿಂದ ಮುದ್ರುಮಕ್ಕಿಗೆ ತೆರಳುವ ಮಾರ್ಗದಲ್ಲಿದ್ದ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು.ಇರ್ಷಾದ್ ಅವರು ಮನೆಯೊಳಕ್ಕೆ ಸತ್ತುಹೋದ ಇಲಿಯನ್ನು ಹೊರಕ್ಕೆ ಬೀಸಾಡುವ ಸಲುವಾಗಿ ಬೆಳಿಗ್ಗೆ ಗೇಟ್ ಹೊರಕ್ಕೆ ಬಂದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದಿದ್ದಾರೆ,ಈ ವೇಳೆ ವಿದ್ಯುತ್ ತಂತಿ ಯಿಂದ ವಿದ್ಯುತ್ ಪ್ರವಹಿಸಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಬೈಂದೂರು ಮೆಸ್ಕಾಂ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.ಈ ಸಂಬಂಧ
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಇರ್ಷಾದ್ ಮೀನುಗಾರರಾಗಿದ್ದು, ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಶನಿವಾರವಷ್ಟೇ ಮನೆಗೆ ಬಂದಿದ್ದರು.ಪತ್ನಿ,ಇಬ್ಬರು ಪುತ್ರರು,ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.ಇರ್ಷಾದ್ ಅವರ ಅಗಲುವಿಕೆಯಿಂದ ಬಡ ಕುಟುಂಬ ಕಂಗಾಲಾಗಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…