ಕುಂದಾಪುರ

ವರ್ಧಂತಿ ಮಹೋತ್ಸವ,ಧಾರ್ಮಿಕ ಸಭಾ ಕಾರ್ಯಕ್ರಮ

Share

ಕುಂದಾಪುರ:ಜಾಲಾಡಿ ಶ್ರೀನಾಗ,ಜಟ್ಟಿಗ ಸಪರಿವಾರ ದೇವಸ್ಥಾನದ ವಾರ್ಷಿಕ ವರ್ಧಂತಿ ಪೂಜಾ ಮಹೋತ್ಸವ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ಶನಿವಾರ ನಡೆಯಿತು.
ಶ್ರೀದೇವರ ವಾರ್ಷಿಕ ವರ್ಧಂತಿ ಮಹೋತ್ಸವ ಅಂಗವಾಗಿ ಭಜನಾ ಕಾರ್ಯಕ್ರಮ,ನಾಗದರ್ಶನ ಸೇವೆ,ಅನ್ನಸಂತರ್ಪಣೆ ಹಾಗೂ ನಾನಾ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು.ಸ್ಥಳೀಯ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಿತು.
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಮ್ಮಾನ:ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಲ್ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಸ್ಥಳೀಯ ವಿದ್ಯಾರ್ಥಿಗಳಾದ ಶ್ರಾವ್ಯ ಜಿ.ದೇವಾಡಿಗ,ದೀಕ್ಷಾ ದೇವಾಡಿಗ,ಸೃಜನಾ ದೇವಾಡಿಗ,ನಿಕಿತಾ ದೇವಾಡಿಗ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಸಮೀಕ್ಷಾ ಎಸ್.ಪೂಜಾರಿ,ರಕ್ಷಿತಾ ಆರ್.ಪೂಜಾರಿ ಅವರನ್ನು ಸಮ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಕಂದಾಯ ಅಧೀಕ್ಷಕ ರಾಘವೇಂದ್ರ ದೇವಾಡಿಗ,ಹೊಸಕಳಿ ಶ್ರೀ ಬೊಬ್ಬರ್ಯ ದೈವಸ್ಥಾನದ ಪಾತ್ರಿ ಚಿಕ್ಕ ದೇವಾಡಿಗ,ಉದ್ಯಮಿ ಮಂಜುನಾಥ ಪೂಜಾರಿ ಭಟ್ರಬೆಟ್ಟು,ಲಕ್ಷ್ಮಣ ದೇವಾಡಿಗ,ಅಧ್ಯಕ್ಷ ಉದಯ ದೇವಾಡಿಗ ಉಪಸ್ಥಿತರಿದ್ದರು.ಶಿಕ್ಷಕ ಕಿರಣ ದೇವಾಡಿಗ ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

4 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago