ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಎವಿಯೇಷನ್ ವಿಭಾಗದ ವತಿಯಿಂದ ಅಗ್ನಿ ಸುರಕ್ಷತೆ ಮತ್ತು ಆರೋಗ್ಯ ಸುರಕ್ಷತೆ ವಿಪತ್ತು ನಿರ್ವಹಣೆ ಕಾರ್ಯಾಗಾರ ನಡೆಯಿತು.
ಅಗ್ನಿ ಸುರಕ್ಷತೆ ಆರೋಗ್ಯ ಸುರಕ್ಷತೆ ವಿಪತ್ತು ನಿರ್ವಹಣೆ ವಿಭಾಗ ಮಂಗಳೂರು ಪ್ರೊ.ಸತ್ಯರಾಜ್ ಅವರು ವಿದ್ಯಾರ್ಥಿಗಳಿಗೆ ಅಗ್ನಿ ಸುರಕ್ಷತೆ ಬಗ್ಗೆ ಹಾಗೂ ಆರೋಗ್ಯ ಸುರಕ್ಷತೆಯ ಕುರಿತು ಮಾಹಿತಿ ನೀಡಿ,ಅಗ್ನಿ ಅವಘಡ ಸಂಭವಿಸಿದಾಗ ಹೇಗೆ ತುರ್ತು ಕ್ರಮ ಕೈಗೊಳ್ಳಬೇಕು ಎನ್ನುವುದರ ಕುರಿತು ಪ್ರಾತ್ಯಕ್ಷಿಕೆ ಮೂಲಕ ಪ್ರದರ್ಶನ ನೀಡಿದರು.
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಅವರು ಮಾತನಾಡಿ,ಅಗ್ನಿ ಸುರಕ್ಷತೆ ಹಾಗೂ ವಿಪತ್ತು ನಿರ್ವಹಣೆ ಕುರಿತು ಮಾಹಿತಿಯನ್ನು ಪಡೆದುಕೊಳ್ಳುವುದು ಅತಿ ಮುಖ್ಯವಾಗಿದೆ,ಅಗ್ನಿ ಅವಘಡ ಸಂಭವಿಸಿದಾಗ ಸೂಕ್ತ ತುರ್ತು ಕ್ರಮ ತೆಗೆದುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ ಎಂದು ತಿಳಿಸಿದರು.
ಕಾಲೇಜಿನ ನಿರ್ದೇಶಕಿ ಮಮತಾ ಹಾಗೂ ಕಾಲೇಜಿನ ಉಪ ಪ್ರಾಂಶುಪಾಲರಾದ ಸುಜಾತ,ಎವಿಯೇಷನ್ ಉಪನ್ಯಾಸಕಿ ಸವಿತಾ ಮತ್ತು ಸಂಸ್ಥೆಯ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು, ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.ಕನ್ನಡ ಉಪನ್ಯಾಸಕಿ ಅನುಪಮಾ ಭಟ್ ನಿರೂಪಿಸಿದರು .
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…