ಮಂಗಳೂರು:ತಮ್ಮನ ಸಾವಿನ ಬಗ್ಗೆ ಅಣ್ಣ ಅನುಮಾನ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಮರು ತನಿಖೆಗಾಗಿ ನ್ಯಾಯಾಲಯಲದ ಆದೇಶದಂತೆ ಮಂಜೇಶ್ವರ-ವಿಟ್ಲ ಪೊಲೀಸರು ಹಾಗೂ ಆರೋಗ್ಯಾಧಿಕಾರಿಗಳ ಸಮ್ಮುಖದಲ್ಲಿ ಕನ್ಯಾನ ಮಸೀದಿಯ ದಫನ ಭೂಮಿಯಿಂದ ಮೃತದೇಹವನ್ನು ಮೇಲಕ್ಕೆತ್ತಿದ್ದ ಘಟನೆ ನಡೆದಿದೆ.
ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ ನಿವಾಸಿ ಅಶ್ರಫ್(44)ಎಂಬವರು ಮಂಜೇಶ್ವರ ಠಾಣಾ ವ್ಯಾಪ್ತಿಯ ಸುಂಕದಕಟ್ಟೆ ಮಜೀರ್ ಪಳ್ಳದಲ್ಲಿ ಪತ್ನಿಯ ಜೊತೆ ವಾಸವಾಗಿದ್ದು ಗೂಡಂಗಡಿ ವ್ಯವಹಾರ ನಡೆಸಿಕೊಂಡಿದ್ದರು.
ಮೇ 5ರಂದು ಮನೆಯಲ್ಲಿ ಊಟ ಮಾಡಿ ಮಲಗಿದ್ದ ಅಶ್ರಫ್ ಅವರು ಮರುದಿನ ಅಂದರೆ ಮೇ 6ರಂದು ಮೃತಪಟ್ಟಿದ್ದರು.ಆದರೆ ತರಾತುರಿಯಲ್ಲಿ ಪತ್ನಿ ಕಡೆಯವರು ಅಶ್ರಫ್ ಮೃತದೇಹವನ್ನು ಕನ್ಯಾನದ ಬಂಡಿಯ ರಹ್ಮಾನಿಯಾ ಜುಮ್ಮಾ ಮಸೀದಿ ಆವರಣದ ದಫನ ಭೂಮಿಗೆ ತಂದು ಅಂತ್ಯಕ್ರಿಯೆ ನಡೆಸಿದ್ದರು. ಮೃತರ ಅಣ್ಣ ಮಹಾರಾಷ್ಟ್ರದ ಪೂನಾದಲ್ಲಿದ್ದ ಇಬ್ರಾಹಿಂ ಅವರು ತಮ್ಮನ ಸಾವು ಸಹಜ ಸಾವಲ್ಲ ಎಂದು ಬಲವಾದ ಅನುಮಾನ ವ್ಯಕ್ತಪಡಿಸಿ ಮಂಜೇಶ್ವರ ಪೊಲೀಸರಿಗೆ ಮೂರು ತನಿಖೆ ಮಾಡುವಂತೆ ದೂರು ನೀಡಿದ್ದರು. ದೂರಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಪಡೆದ ಮಂಜೇಶ್ವರ ಪೊಲೀಸರು ಮಂಗಳೂರು ಯೇನಪೋಯ ಆಸ್ಪತ್ರೆಯ ಫಾರೆನ್ಸಿಕ್ ತಜ್ಞರು, ಬಂಟ್ವಾಳ ತಹಶೀಲ್ದಾರ್ ಮತ್ತು ವಿಟ್ಲ ಪೊಲೀಸರ ಸಹಕಾರದಲ್ಲಿ ಮಸೀದಿಯ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಿದ್ದ ಸ್ಥಳದಿಂದ ಅಶ್ರಫ್ ಅವರ ಮೃತದೇಹವನ್ನು ಮೇಲಕ್ಕೆತ್ತಿ ದ್ದಾರೆ. ಸುದ್ಧಿ ತಿಳಿದು ಸಾಕಷ್ಟು ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು ಅಶ್ರಫ್ ಸಾವಿನ ಸತ್ಯಾಂಶ ತನಿಖೆಯಲ್ಲಿ ಬಯಲಾಗಬೇಕಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…