ಮಂಗಳೂರು:ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಶಿವಕುಮಾರ್ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿಗಳೊಂದಿಗೆ ಮಂಜುನಾಥನ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿ ಹಾಗೂ ಅಮ್ಮನವರ ದರ್ಶನ ಮಾಡಿದ್ದೇವೆ.ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಉತ್ತಮ ಮಳೆ,ಬೆಳೆಯಾಗಿ ರಾಜ್ಯದ ಜನರು ಶಾಂತಿ, ನೆಮ್ಮದಿಯಿಂದ ಇರಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ಹೇಳಿದರು.
ದೇವರ ದರ್ಶನದ ವೇಳೆ ಅನೇಕ ಮಹಿಳಾ ಭಕ್ತಾಧಿಗಳು ತಮಗೆ ಪ್ರತಿ ತಿಂಗಳು 2 ಸಾವಿರ ಹಣ ಬರುತ್ತಿದೆ ಎಂದು ಸಂತೋಷ ಹಂಚಿಕೊಂಡರು. ಅವರ ಪ್ರಾರ್ಥನೆ ಹಾಗೂ ಆಶೀರ್ವಾದ ನಮಗೆ ಹೆಚ್ಚಿನ ಶಕ್ತಿ ನೀಡುತ್ತದೆ.ಅವರ ಮನೆಯಲ್ಲಿ ಗೃಹಜ್ಯೋತಿ ಬೆಳಗುತ್ತಿದೆ.ಅನ್ನಭಾಗ್ಯ ಸಿಗುತ್ತಿದೆ.ಈ ಯೋಜನೆಗಳನ್ನು ಜಾರಿ ಮಾಡಿರುವುದಕ್ಕೆ ಮಂಜುನಾಥ ನಮಗೆ ಆಶೀರ್ವಾದ ಮಾಡಲಿದ್ದಾನೆ” ಎಂದು ನಂಬಿದ್ದೇನೆ ಎಂದು ಸಂತೋಷ ಹಂಚಿಕೊಂಡರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…