ಕುಂದಾಪುರ

ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

Share

ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮದ ಬಡಾಕೆರೆ ನಿವಾಸಿ ಮಂಜು (57) ಎಂಬುವವರು ಬಡಾಕೆರೆ ಸಮೀಪವಿರುವ ಸೌಪರ್ಣಿಕಾ ನದಿ ದಡದ ಮೇಲೆ ನಿಂತು ಬಲೆ ಬೀಸಿ ಮೀನು ಹಿಡಿಯುವ ಸಮಯದಲ್ಲಿ ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

ಘಟನೆ ವಿವರ:-ಮೀನುಗಾರಿಕೆ ವೃತ್ತಿಯನ್ನು ಮಾಡಿಕೊಂಡಿರುವ ಮಂಜು ಅವರು ಎಂದಿನಂತೆ ಸೋಮವಾರ ಮಧ್ಯಾಹ್ನ 3.30 ಸುಮಾರಿಗೆ ನದಿಯಲ್ಲಿ ಮೀನು ಹಿಡಿಯಲೆಂದು ಮನೆಯಿಂದ ತೆರಳಿದ್ದಾರೆ.ಸೌಪರ್ಣಿಕಾ ನದಿ ದಡದ ಮೇಲೆ ನಿಂತು ಬಲೆ ಬೀಸಿ ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಸೌಪರ್ಣಿಕಾ ನದಿಗೆ ಕಾಲು ಜಾರಿ ಬಿದ್ದು ನಾಪತ್ತೆ ಆಗಿದ್ದರು.ಮಂಗಳವಾರ ಸೌಪರ್ಣಿಕಾ ನದಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.ಬೈಂದೂರು ಠಾಣಾಧಿಕಾರಿ ಡಾ.ಹರ್ಷ ಐಪಿಎಸ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದರು.ಈ ಸಂಬಂಧ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 days ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago